Revised Common Lectionary (Semicontinuous)
ರಚನೆಗಾರ: ದಾವೀದ.
15 ಯೆಹೋವನೇ, ನಿನ್ನ ಪವಿತ್ರ ಗುಡಾರದಲ್ಲಿ ಎಂಥವನು ವಾಸಿಸಬಲ್ಲನು?
ನಿನ್ನ ಪವಿತ್ರ ಪರ್ವತದ ಮೇಲೆ ಎಂಥವನು ನೆಲಸಬಲ್ಲನು?
2 ಅವನು ನಿರ್ದೋಷಿಯೂ ಒಳ್ಳೆಯ ಕಾರ್ಯಗಳನ್ನು ಮಾಡುವವನೂ
ಹೃದಯದಿಂದ ಸತ್ಯವನ್ನು ಮಾತಾಡುವವನೂ ಆಗಿರಬೇಕು.
3 ಅವನು ಚಾಡಿ ಹೇಳದವನೂ ನೆರೆಯವರಿಗೆ ಕೇಡನ್ನು ಮಾಡದವನೂ
ತನ್ನ ಸ್ವಂತ ಕುಟುಂಬದವರನ್ನು ನಿಂದಿಸದವನೂ ಆಗಿರಬೇಕು.
4 ಅವನು ದೇವದೂಷಕರನ್ನು ತಿರಸ್ಕರಿಸುವವನೂ
ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಗೌರವಿಸುವವನೂ
ತನಗೆ ತೊಂದರೆಯಾದರೂ
ಕೊಟ್ಟ ಮಾತಿಗೆ ತಪ್ಪದವನೂ ಆಗಿರಬೇಕು.
5 ಅವನು ಕೊಟ್ಟ ಸಾಲಕ್ಕೆ ಬಡ್ಡಿ ಕೇಳದವನೂ
ನಿರಪರಾಧಿಗೆ ಕೇಡುಮಾಡಲು ಲಂಚ ತೆಗೆದುಕೊಳ್ಳದವನೂ ಆಗಿರಬೇಕು.
ಹೀಗೆ ಜೀವಿಸುವವನು
ದೇವರಿಗೆ ಸಮೀಪವಾಗಿಯೇ ಇರುತ್ತಾನೆ.[a]
ಇಸ್ರೇಲಿನ ನಾಯಕರು ದುಷ್ಟತ್ವವನ್ನು ನಡಿಸಿದ್ದಾರೆ
3 ಆಗ ನಾನು ಹೇಳಿದ್ದೇನೆಂದರೆ, “ಯಾಕೋಬಿನ ನಾಯಕರೇ, ಇಸ್ರೇಲಿನ ಅಧಿಪತಿಗಳೇ, ನನ್ನ ಮಾತನ್ನು ಕೇಳಿರಿ.
ನ್ಯಾಯ ಏನು ಎಂದು ನಿಮಗೆ ತಿಳಿದಿರಬೇಕು.
2 ನೀವು ಶಿಷ್ಟತನವನ್ನು ದ್ವೇಷಿಸಿ ದುಷ್ಟತನವನ್ನು ಪ್ರೀತಿಸುತ್ತೀರಿ!
ನೀವು ಜನರ ಚರ್ಮವನ್ನು ಸುಲಿಯುತ್ತಾ
ಅವರ ಎಲುಬುಗಳಿಂದ ಮಾಂಸವನ್ನು ಕಿತ್ತು ತೆಗೆಯುತ್ತೀರಿ.
3 ನೀವು ನನ್ನ ಜನರ ದೇಹದಿಂದ ಚರ್ಮ ತೆಗೆದು ಎಲುಬುಗಳನ್ನು ತುಂಡುಮಾಡಿ ಅವರನ್ನು ನಾಶಮಾಡುತ್ತೀರಿ.
ತಪ್ಪಲೆಯೊಳಗೆ ಬೇಯಿಸಲು ಮಾಂಸ ತುಂಡುಮಾಡಿ ಹಾಕುವಂತೆ ನೀವು ಅವರ ಎಲುಬುಗಳನ್ನು ತುಂಡುಮಾಡುತ್ತೀರಿ.
4 ನೀವು ಯೆಹೋವನಿಗೆ ಪ್ರಾರ್ಥಿಸಬಹುದು.
ಆದರೆ ಆತನು ನಿಮಗೆ ಉತ್ತರಕೊಡುವದಿಲ್ಲ.
ನಿಮ್ಮ ಕೆಟ್ಟ ಪಾಪಗಳ ನಿಮಿತ್ತ
ತನ್ನ ಮುಖವನ್ನು ಮರೆಮಾಡಿಕೊಳ್ಳುತ್ತಾನೆ.”
ತನ್ನ ಮರಣದ ಬಗ್ಗೆ ಯೇಸುವಿನ ಪ್ರಕಟನೆ
31 ಯೂದನು ಹೊರಟುಹೋದ ಮೇಲೆ ಯೇಸು, “ಈಗ ಮನುಷ್ಯಕುಮಾರನಿಗೆ ಮಹಿಮೆಯಾಗುವುದು. ಅಲ್ಲದೆ, ಮನುಷ್ಯಕುಮಾರನ ಮೂಲಕ ದೇವರಿಗೂ ಮಹಿಮೆಯಾಗುವುದು. 32 ಆತನ ಮೂಲಕವಾಗಿ ದೇವರಿಗೆ ಮಹಿಮೆಯಾಗುವುದರಿಂದ ತಕ್ಷಣವೇ ದೇವರ ಮೂಲಕವಾಗಿಯೂ ಆತನಿಗೆ ಮಹಿಮೆಯಾಗುವುದು” ಎಂದನು.
33 ಯೇಸು, “ನನ್ನ ಮಕ್ಕಳೇ, ಇನ್ನು ಸ್ವಲ್ಪ ಸಮಯ ಮಾತ್ರ ನಾನು ನಿಮ್ಮೊಂದಿಗೆ ಇರುತ್ತೇನೆ. ನೀವು ನನಗಾಗಿ ಹುಡುಕುವಿರಿ. ನಾನು ಯೆಹೂದ್ಯರಿಗೆ ಹೇಳಿದ್ದನ್ನು ನಿಮಗೂ ಹೇಳುತ್ತೇನೆ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ.
34 “ನಾನು ನಿಮಗೆ ಹೊಸ ಆಜ್ಞೆಯನ್ನು ಕೊಡುತ್ತೇನೆ. ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. 35 ನಾನು ನಿಮ್ಮನ್ನು ಪ್ರೀತಿಸಿದಂತೆಯೇ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನೀವು ಒಬ್ಬರನ್ನೊಬ್ಬರು ಪ್ರೀತಿಸಿದರೆ, ನೀವೂ ನನ್ನ ಶಿಷ್ಯರೆಂಬುದನ್ನು ಎಲ್ಲಾ ಜನರು ತಿಳಿದುಕೊಳ್ಳುವರು” ಎಂದು ಹೇಳಿದನು.
Kannada Holy Bible: Easy-to-Read Version. All rights reserved. © 1997 Bible League International