Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 93

93 ಯೆಹೋವನೇ ರಾಜನು.
    ಆತನು ವೈಭವವನ್ನೂ ಬಲವನ್ನೂ ವಸ್ತ್ರದಂತೆ ಧರಿಸಿಕೊಂಡಿದ್ದಾನೆ.
ಆತನು ಸಿದ್ಧನಾಗಿರುವುದರಿಂದ ಇಡೀ ಪ್ರಂಪಚವೇ ಸುರಕ್ಷಿತವಾಗಿರುವುದು.
    ಅದು ಕದಲುವುದೇ ಇಲ್ಲ.
ದೇವರೇ, ಆದಿಯಿಂದಲೂ ನಿನ್ನ ರಾಜ್ಯವು ಶಾಶ್ವತವಾಗಿದೆ.
    ಆದಿಯಿಂದಲೂ ಇರುವಾತನು ನೀನೊಬ್ಬನೇ!
ಯೆಹೋವನೇ, ನದಿಗಳ ಶಬ್ದವು ಮೊರೆಯುತ್ತಿದೆ.
    ರಭಸದಿಂದ ಬಡಿಯುತ್ತಿರುವ ಅಲೆಗಳು ಭೋರ್ಗರೆಯುತ್ತಿವೆ.
ಬಿರುಸಾಗಿ ಬಡಿಯುತ್ತಿರುವ ಸಮುದ್ರದ ಅಲೆಗಳು ಭೋರ್ಗರೆಯುತ್ತಾ ಪ್ರಬಲವಾಗಿವೆ.
    ಆದರೆ ಉನ್ನತದಲ್ಲಿರುವ ಯೆಹೋವನು ಅದಕ್ಕಿಂತ ಎಷ್ಟೋ ಬಲಿಷ್ಠನಾಗಿದ್ದಾನೆ.
ಯೆಹೋವನೇ, ನಿನ್ನ ಕಟ್ಟಳೆಗಳು ಶಾಶ್ವತವಾಗಿವೆ.
    ನಿನ್ನ ಪವಿತ್ರಾಲಯವು ಬಹುಕಾಲದವರೆಗೆ ಇರುತ್ತದೆ.

2 ರಾಜರುಗಳು 2:13-15

13 ಎಲೀಯನ ಮೇಲಂಗಿಯು ನೆಲದ ಮೇಲೆ ಬಿತ್ತು. ಎಲೀಷನು ಅದನ್ನು ಎತ್ತಿಕೊಂಡು ಜೋರ್ಡನ್ ನದಿ ತೀರಕ್ಕೆ ಬಂದನು. ಆ ಕಂಬಳಿಯಿಂದ ನೀರನ್ನು ಹೊಡೆದು, “ಎಲೀಯನ ದೇವರಾದ ಯೆಹೋವನು ಎಲ್ಲಿದ್ದಾನೆ?” ಎಂದು ಕೇಳಿದನು. 14 ಎಲೀಷನು ನೀರನ್ನು ಹೊಡೆದಾಗ, ನೀರು ಎರಡು ಭಾಗವಾಗಿ ಬಲಗಡೆಯಲ್ಲೂ ಎಡಗಡೆಯಲ್ಲೂ ನಿಂತುಕೊಂಡಿತು! ಎಲೀಷನು ನದಿಯನ್ನು ದಾಟಿದನು.

ಎಲೀಯನ ಬಗ್ಗೆ ಪ್ರವಾದಿಗಳ ವಿಚಾರ

15 ಜೆರಿಕೊದಲ್ಲಿ ಪ್ರವಾದಿಗಳ ಗುಂಪೊಂದು ಎಲೀಷನನ್ನು ಕಂಡು, “ಎಲೀಯನ ಆತ್ಮವು ಈಗ ಎಲೀಷನ ಮೇಲಿದೆ!” ಎಂದು ಹೇಳಿ ಎಲೀಷನನ್ನು ಭೇಟಿಮಾಡಲು ಬಂದರು. ಅವರು ಎಲೀಷನಿಗೆ ಸಾಷ್ಟಾಂಗನಮಸ್ಕಾರ ಮಾಡಿದರು.

ಯೋಹಾನ 8:21-30

ಯೆಹೂದ್ಯರ ಅಪನಂಬಿಕೆ

21 ಯೇಸು ಅವರಿಗೆ, “ನಾನು ನಿಮ್ಮನ್ನು ಬಿಟ್ಟುಹೋಗುತ್ತೇನೆ. ನೀವು ನನ್ನನ್ನು ಹುಡುಕುವಿರಿ. ಆದರೆ ನೀವು ನಿಮ್ಮ ಪಾಪದಲ್ಲೇ ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ” ಎಂದು ಹೇಳಿದನು.

22 ಆದ್ದರಿಂದ ಯೆಹೂದ್ಯರು, “ಯೇಸು ತನ್ನನ್ನು ತಾನೇ ಕೊಂದುಕೊಳ್ಳುವನೇ? ಅದಕ್ಕಾಗಿಯೇ, ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಎಂದು ಹೇಳಿದನೇ?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.

23 ಅದಕ್ಕೆ ಯೇಸು, “ನೀವು ಕೆಳಗಿನವರಾಗಿದ್ದೀರಿ. ನಾನಾದರೋ ಮೇಲಿನವನು. ನೀವು ಈ ಲೋಕದವರಾಗಿದ್ದೀರಿ. ಆದರೆ ನಾನು ಈ ಲೋಕದವನಲ್ಲ. 24 ನೀವು ನಿಮ್ಮ ಪಾಪಗಳಲ್ಲೇ ಸಾಯುವಿರಿ ಎಂದು ನಾನು ನಿಮಗೆ ಹೇಳಿದೆ. ಹೌದು, ನಾನೇ ಆತನೆಂಬುದನ್ನು ನೀವು ನಂಬದಿದ್ದರೆ ನಿಮ್ಮ ಪಾಪಗಳಲ್ಲಿಯೇ ನೀವು ಸಾಯುವಿರಿ” ಎಂದು ಹೇಳಿದನು.

25 ಯೆಹೂದ್ಯರು, “ಹಾಗಾದರೆ, ನೀನು ಯಾರು?” ಎಂದು ಕೇಳಿದರು.

ಯೇಸು, “ನಾನು ಯಾರೆಂದು ನಿಮಗೆ ಮೊದಲಿಂದ ತಿಳಿಸುತ್ತಾ ಬಂದೆನೋ, ಆತನೇ ನಾನು. 26 ನಿಮ್ಮ ಬಗ್ಗೆ ಹೇಳಲು ನನ್ನಲ್ಲಿ ಅನೇಕ ಸಂಗತಿಗಳಿವೆ. ನಾನು ನಿಮಗೆ ತೀರ್ಪು ಮಾಡಬಲ್ಲೆನು. ಆದರೆ ನನ್ನನ್ನು ಕಳುಹಿಸಿದಾತನಿಂದ ನಾನು ಕೇಳಿದ ಸಂಗತಿಗಳನ್ನು ಮಾತ್ರ ಜನರಿಗೆ ಹೇಳುತ್ತೇನೆ. ಆತನು ಸತ್ಯವನ್ನೇ ತಿಳಿಸುತ್ತಾನೆ” ಎಂದು ಉತ್ತರಕೊಟ್ಟನು.

27 ಯೇಸು ಯಾರ ಬಗ್ಗೆ ಮಾತಾಡುತ್ತಿದ್ದಾನೆ ಎಂಬುದನ್ನು ಜನರು ಅರ್ಥಮಾಡಿಕೊಳ್ಳಲಿಲ್ಲ. ಯೇಸು ಅವರಿಗೆ ತಂದೆಯ (ದೇವರ) ಬಗ್ಗೆ ಹೇಳುತ್ತಿದ್ದನು. 28 ಆದ್ದರಿಂದ ಆತನು ಅವರಿಗೆ, “ನೀವು ಮನುಷ್ಯಕುಮಾರನನ್ನು ಮೇಲಕ್ಕೇರಿಸುವಿರಿ (ಕೊಲ್ಲುವಿರಿ). ನಾನೇ ಆತನೆಂಬುದು ಆಗ ನಿಮಗೆ ತಿಳಿಯುವುದು. ನಾನು ಈ ಕಾರ್ಯಗಳನ್ನು ನನ್ನ ಸ್ವಂತ ಅಧಿಕಾರದಿಂದ ಮಾಡುತ್ತಿಲ್ಲ ಎಂಬುದನ್ನು ನೀವು ತಿಳಿದುಕೊಳ್ಳುವಿರಿ. ಅಲ್ಲದೆ, ತಂದೆಯು ನನಗೆ ಉಪದೇಶಿಸಿದ ಸಂಗತಿಗಳನ್ನು ಮಾತ್ರ ನಾನು ಹೇಳುತ್ತೇನೆಂಬುದೂ ನಿಮಗೆ ಅರಿವಾಗುವುದು. 29 ನನ್ನನ್ನು ಕಳುಹಿಸಿದಾತನು (ದೇವರು) ನನ್ನೊಂದಿಗೆ ಇದ್ದಾನೆ. ಆತನಿಗೆ ಮೆಚ್ಚಿಕೆಯಾದದ್ದನ್ನೇ ನಾನು ಯಾವಾಗಲೂ ಮಾಡುತ್ತೇನೆ. ಆದ್ದರಿಂದ ಆತನು ನನ್ನನ್ನು ಒಬ್ಬಂಟಿಗನಾಗಿ ಬಿಟ್ಟುಬಿಟ್ಟಿಲ್ಲ” ಎಂದು ಹೇಳಿದನು. 30 ಯೇಸು ಈ ಸಂಗತಿಗಳನ್ನು ಹೇಳುತ್ತಿದ್ದಾಗ, ಅನೇಕ ಜನರು ಆತನಲ್ಲಿ ನಂಬಿಕೆಯಿಟ್ಟರು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International