Revised Common Lectionary (Semicontinuous)
ಪ್ರಾರ್ಥನೆ. ರಚನೆಗಾರ: ದಾವೀದ.
17 ಯೆಹೋವನೇ, ನ್ಯಾಯವಾದ ನನ್ನ ಪ್ರಾರ್ಥನೆಗೆ ಕಿವಿಗೊಡು.
ನನ್ನ ಮೊರೆಯನ್ನು ಆಲೈಸು, ನನ್ನ ಯಥಾರ್ಥವಾದ ಪ್ರಾರ್ಥನೆಗೆ ಕಿವಿಗೊಡು.
2 ನನ್ನ ಕುರಿತಾಗಿ ನ್ಯಾಯವಾದ ತೀರ್ಪು ನಿನ್ನಿಂದಲೇ ಬರಲಿ.
ನೀನು ಸತ್ಯವನ್ನು ನೋಡಬಲ್ಲಾತನಾಗಿರುವೆ.
3 ನೀನು ನನ್ನ ಅಂತರಾಳವನ್ನು ರಾತ್ರಿಯೆಲ್ಲಾ ಪರೀಕ್ಷಿಸಿರುವೆ.
ನೀನು ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದಾಗ
ನನ್ನಲ್ಲಿ ಯಾವ ದೋಷವೂ ಕಂಡುಬರಲಿಲ್ಲ.
ನಾನು ಯಾವ ತಪ್ಪನ್ನೂ ಮಾಡಿರಲಿಲ್ಲ.
4 ನಿನ್ನ ಆಜ್ಞೆಗಳಿಗೆ ವಿಧೇಯನಾಗಲು
ನನ್ನಿಂದಾದಷ್ಟು ಪ್ರಯತ್ನಿಸಿದ್ದೇನೆ.
5 ನಿನ್ನ ಜೀವಮಾರ್ಗದಲ್ಲೇ ಹೆಜ್ಜೆಯಿಡುತ್ತಾ ನಡೆಯುತ್ತಿದ್ದೇನೆ.
ನನ್ನ ಪಾದವು ತಪ್ಪು ದಾರಿಗೆ ಹೋಗಲಿಲ್ಲ.
6 ದೇವರೇ, ನಾನು ನಿನ್ನನ್ನು ಕರೆದಾಗಲ್ಲೆಲ್ಲಾ, ನೀನು ನನಗೆ ಉತ್ತರಿಸಿದೆ.
ಆದ್ದರಿಂದ ಈಗಲೂ ನನಗೆ ಕಿವಿಗೊಡು.
7 ದೇವರೇ, ನಿನ್ನಲ್ಲಿ ಭರವಸೆಯಿಟ್ಟಿರುವ ಭಕ್ತರಿಗೆ
ನೀನು ಸಹಾಯಮಾಡುವೆ;
ಅವರು ನಿನ್ನ ಬಲಗಡೆಯಲ್ಲಿ ಸುರಕ್ಷಿತವಾಗಿರುವರು.
ಆದ್ದರಿಂದ ನಿನ್ನ ಭಕ್ತನಾದ ನನ್ನ ಪ್ರಾರ್ಥನೆಗೂ ಕಿವಿಗೊಡು.
15 ನಾನು ನ್ಯಾಯಕ್ಕಾಗಿ ಪ್ರಾರ್ಥಿಸಿದ್ದರಿಂದ ನನಗೆ ನಿನ್ನ ಮುಖದ ದರ್ಶನವಾಗುವುದು.
ಎಚ್ಚೆತ್ತಾಗ ನಿನ್ನ ಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು.
ಇಸ್ರೇಲರು ಸ್ವದೇಶಕ್ಕೆ ಹಿಂದಿರುಗುವರು
14 ಮುಂದಿನ ದಿವಸಗಳಲ್ಲಿ ಯೆಹೋವನು ಯಾಕೋಬನ ಮೇಲೆ ಮತ್ತೆ ಪ್ರೀತಿತೋರುವನು. ಯೆಹೋವನು ಮತ್ತೆ ಇಸ್ರೇಲರನ್ನು ಆರಿಸುವನು. ಆ ಸಮಯದಲ್ಲಿ ಅವರ ದೇಶವನ್ನು ಅವರಿಗೆ ಹಿಂತಿರುಗಿಸುವನು. ಆಗ ಯೆಹೂದ್ಯರಲ್ಲದವರು ಯೆಹೂದ್ಯರೊಂದಿಗೆ ಸೇರಿಕೊಳ್ಳುವರು. ಅವರೆಲ್ಲರೂ ಒಂದೇ ವಂಶದವರಾಗುವರು. ಅದು ಯಾಕೋಬನ ವಂಶ. 2 ಆ ಜನಾಂಗಗಳವರು ಇಸ್ರೇಲರನ್ನು ಇಸ್ರೇಲ್ ದೇಶಕ್ಕೆ ನಡಿಸುವರು. ಆ ಪರಜನಾಂಗಗಳ ಗಂಡಸರು ಹೆಂಗಸರು ಇಸ್ರೇಲರ ಗುಲಾಮರಾಗಿರುವರು. ಹಿಂದಿನ ದಿವಸಗಳಲ್ಲಿ ಆ ಜನರು ಇಸ್ರೇಲರನ್ನು ಬಲವಂತದಿಂದ ತಮ್ಮ ಗುಲಾಮರನ್ನಾಗಿ ಮಾಡಿದರು. ಆದರೆ ಈಗ ಇಸ್ರೇಲರು ಆ ಜನಾಂಗಗಳನ್ನು ಸೋಲಿಸಿ ಅವರನ್ನು ಆಳುವರು.
ಫಿಲಿಪ್ಪಿ ಕ್ರೈಸ್ತರಿಗೆ ಪೌಲನ ವಂದನೆ
10 ನನ್ನ ಮೇಲೆ ನಿಮಗಿರುವ ಚಿಂತೆಯನ್ನು ನೀವು ಮತ್ತೆ ತೋರಿಸಿದ್ದಕ್ಕಾಗಿ ನಾನು ಪ್ರಭುವಿನಲ್ಲಿ ಬಹು ಸಂತೋಷಪಡುತ್ತೇನೆ. ನೀವು ನನ್ನ ಬಗ್ಗೆ ಚಿಂತಿಸುತ್ತಲೇ ಇದ್ದೀರಿ. ಆದರೆ ಅದನ್ನು ತೋರಿಸಲು ನಿಮಗೆ ಅವಕಾಶವೇ ಇರಲಿಲ್ಲ. 11 ನಾನು ಈ ಮಾತುಗಳನ್ನು ಹೇಳುತ್ತಿರುವುದು ನನಗಿರುವ ಕೊರತೆಯ ದೆಸೆಯಿಂದಲ್ಲ. ನನ್ನಲ್ಲಿರುವಂಥವುಗಳಲ್ಲಿ ಮತ್ತು ನನಗೆ ಸಂಭವಿಸುವ ಪ್ರತಿಯೊಂದರಲ್ಲಿ ತೃಪ್ತನಾಗಿರಲು ನಾನು ಕಲಿತುಕೊಂಡಿದ್ದೇನೆ. 12 ಹಸಿವೆಯಿಂದಿರುವಾಗಲೂ ಸಮೃದ್ಧಿಯುಳ್ಳವನಾಗಿರುವಾಗಲೂ ಹೇಗೆ ಜೀವಿಸಬೇಕೆಂಬುದು ನನಗೆ ತಿಳಿದಿದೆ. ಯಾವ ಸಮಯದಲ್ಲಾಗಲಿ ಯಾವ ಪರಿಸ್ಥಿತಿಯಲ್ಲಾಗಲಿ ಸಂತೋಷದಿಂದಿರುವ ಗುಟ್ಟು ನನಗೆ ತಿಳಿದಿದೆ. ಊಟಕ್ಕೆ ಬೇಕಾದಷ್ಟು ಇರುವಾಗಲೂ ಇಲ್ಲದಿರುವಾಗಲೂ ನನಗೆ ಅಗತ್ಯವಾದವುಗಳನ್ನು ಹೊಂದಿರುವಾಗಲೂ ಹೊಂದಿಲ್ಲದಿರುವಾಗಲೂ ಸಂತೋಷವಾಗಿರಲು ಕಲಿತುಕೊಂಡಿದ್ದೇನೆ. 13 ಕ್ರಿಸ್ತನ ಮೂಲಕ ನಾನು ಎಲ್ಲಾ ಕಾರ್ಯಗಳನ್ನು ಮಾಡಬಲ್ಲೆನು. ಏಕೆಂದರೆ ಆತನು ನನ್ನನ್ನು ಬಲಪಡಿಸುತ್ತಾನೆ.
14 ಆದರೂ ನಾನು ಕೊರತೆಯಲ್ಲಿದ್ದಾಗ ನೀವು ನನಗೆ ಸಹಾಯ ಮಾಡಿದ್ದು ಒಳ್ಳೆಯದಾಯಿತು. 15 ಇದಲ್ಲದೆ ಫಿಲಿಪ್ಪಿ ಪಟ್ಟಣದವರೇ, ನಾನು ಮೊದಲು ನಿಮ್ಮಲ್ಲಿ ಸುವಾರ್ತೆಯನ್ನು ಸಾರಿ ಮಕೆದೋನಿಯಕ್ಕೆ ಹೊರಟಾಗ, ನಿಮ್ಮ ಸಭೆಯೊಂದೇ ನನಗೆ ಸಹಾಯ ಮಾಡಿದ್ದು ನಿಮಗೆ ಗೊತ್ತಿದೆ.
Kannada Holy Bible: Easy-to-Read Version. All rights reserved. © 1997 Bible League International