Revised Common Lectionary (Semicontinuous)
ಎರಡನೆ ಭಾಗ
(ಕೀರ್ತನೆಗಳು 42–72)
ರಚನೆಗಾರರು: ಕೋರಹೀಯರು.
42 ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಬಯಸುವಂತೆಯೇ
ನನ್ನ ಆತ್ಮವು ನಿನ್ನನ್ನು ಬಯಸುತ್ತದೆ.
2 ನನ್ನ ಆತ್ಮವು ಜೀವಸ್ವರೂಪನಾದ ದೇವರಿಗಾಗಿ ಬಾಯಾರಿದೆ.
ನಾನು ಯಾವಾಗ ಆತನನ್ನು ಸಂಧಿಸುವೆನು?
3 “ನಿನ್ನ ದೇವರು ಎಲ್ಲಿ?” ಎಂದು ನನ್ನ ವೈರಿಗಳು ಯಾವಾಗಲೂ ಗೇಲಿಮಾಡುವುದರಿಂದ
ಹಗಲಿರುಳು ಕಣ್ಣೀರೇ ನನಗೆ ಆಹಾರವಾಯಿತು.
4 ಆಗ ನಾನು, ಹಬ್ಬದ ಉತ್ಸಾಹದಲ್ಲಿ ಜನಸಮೂಹದೊಡನೆ ಹರ್ಷಿಸುತ್ತಾ
ಸ್ತುತಿಗೀತೆಗಳನ್ನು ಹಾಡುತ್ತಾ ಅವರನ್ನು ದೇವಾಲಯಕ್ಕೆ ಮುನ್ನಡೆಸುತ್ತಿದ್ದದ್ದನ್ನು
ನೆನಪಿಗೆ ತಂದುಕೊಂಡು ಹೃದಯದಲ್ಲಿ ಕೊರಗುವೆ.
5 ನನ್ನ ಆತ್ಮವೇ, ನೀನು ವ್ಯಸನದಿಂದಿರುವುದೇಕೆ?
ಗಲಿಬಿಲಿಗೊಂಡಿರುವುದೇಕೆ?
ದೇವರನ್ನು ನಿರೀಕ್ಷಿಸು;
ನನ್ನ ರಕ್ಷಕನೂ ದೇವರೂ ಆಗಿರುವ ಆತನನ್ನು ಸ್ತುತಿಸುತ್ತಲೇ ಇರುವೆನು.
6 ನನ್ನ ದೇವರೇ, ನಾನು ಕುಗ್ಗಿಹೋಗಿದ್ದೇನೆ.
ಆದ್ದರಿಂದ ಹೆರ್ಮೊನ್ ಪರ್ವತದಲ್ಲಿಯೂ ಜೋರ್ಡನ್ ನದಿಯ ಪ್ರದೇಶದಲ್ಲಿಯೂ
ಮಿಸ್ಸಾರ್ ಬೆಟ್ಟದಲ್ಲಿಯೂ ನಾನು ನಿನ್ನನ್ನು ಜ್ಞಾಪಿಸಿಕೊಳ್ಳುವೆನು.
7 ಜಲಪಾತದ ಘೋಷದಂತೆಯೂ
ಪ್ರವಾಹದ ಘರ್ಜನೆಯಂತೆಯೂ ಇಕ್ಕಟ್ಟುಗಳು ನನಗೆ ಬಂದಿವೆ.
ಸಮುದ್ರದ ಅಲೆಗಳಂತೆ
ದುಃಖವು ನನ್ನನ್ನು ಆವರಿಸಿಕೊಂಡಿದೆ.
8 ಹಗಲಲ್ಲಿ ಯೆಹೋವನು ನನಗೆ ನಿಜಪ್ರೀತಿಯನ್ನು ತೋರುವುದರಿಂದ
ಜೀವಸ್ವರೂಪನಾದ ಆತನಿಗೆ ಪ್ರತಿ ರಾತ್ರಿಯಲ್ಲಿಯೂ ನೂತನ ಕೀರ್ತನೆಯನ್ನು ಹಾಡುವೆ; ಆತನಲ್ಲಿ ಪ್ರಾರ್ಥಿಸುವೆ.
9 ನನ್ನ ಬಂಡೆಯಾದ ದೇವರಿಗೆ,
“ನೀನು ನನ್ನನ್ನು ಯಾಕೆ ಮರೆತುಬಿಟ್ಟೆ?
ನನ್ನ ಶತ್ರುಗಳ ಕ್ರೂರತೆಯಿಂದ ನಾನೇಕೆ ಸಂಕಟಪಡಬೇಕು?” ಎಂದು ಕೇಳುವೆ.
10 ನನ್ನ ವಿರೋಧಿಗಳು ಸತತವಾಗಿ,
“ನಿನ್ನ ದೇವರು ಎಲ್ಲಿ?” ಎಂದು ಕೇಳುವುದರಿಂದ ನನ್ನ ಮೂಳೆಗಳು ಮುರಿದಂತಾಗಿವೆ.
11 ನನ್ನ ಆತ್ಮವೇ, ನೀನು ವ್ಯಸನದಿಂದಿರುವುದೇಕೆ?
ಗಲಿಬಿಲಿಗೊಂಡಿರುವುದೇಕೆ?
ದೇವರನ್ನು ನಿರೀಕ್ಷಿಸು;
ನನ್ನ ರಕ್ಷಕನೂ ದೇವರೂ ಆಗಿರುವ ಆತನನ್ನು ಸ್ತುತಿಸುತ್ತಲೇ ಇರುವೆನು.
13 ಮರುದಿನ ಮೋಶೆಯು ಜನರಿಗೆ ನ್ಯಾಯನಿರ್ಣಯ ಮಾಡಲು ತನ್ನ ಆಸನದ ಮೇಲೆ ಕುಳಿತುಕೊಂಡನು. ಅಲ್ಲಿ ಬಹಳ ಜನರಿದ್ದರು, ಆದ್ದರಿಂದ ಅವರು ಮುಂಜಾನೆಯಿಂದ ಸಾಯಂಕಾಲದವರೆಗೆ ಅವನ ಸುತ್ತಲೂ ನಿಂತುಕೊಂಡಿದ್ದರು.
14 ಮೋಶೆಯು ಜನರ ನ್ಯಾಯತೀರಿಸುವುದನ್ನು ಇತ್ರೋನನು ನೋಡಿ, “ನೀನು ಯಾಕೆ ಹೀಗೆ ಮಾಡುತ್ತಿರುವೆ? ನೀನೊಬ್ಬನೇ ಯಾಕೆ ನ್ಯಾಯತೀರಿಸಬೇಕು? ಜನರು ದಿನವೆಲ್ಲಾ ನಿನ್ನ ಬಳಿಗೆ ಯಾಕೆ ಬರಬೇಕು?” ಎಂದು ಕೇಳಿದನು.
15 ಆಗ ಮೋಶೆ ತನ್ನ ಮಾವನಿಗೆ, “ಜನರು ನನ್ನ ಬಳಿಗೆ ಬಂದು ದೇವರ ತೀರ್ಮಾನವನ್ನು ಕೇಳಬಯಸುತ್ತಾರೆ. 16 ಅವರೊಳಗೆ ವ್ಯಾಜ್ಯವಿದ್ದರೆ ಅವರು ನನ್ನ ಬಳಿಗೆ ಬರುತ್ತಾರೆ. ಯಾವನು ನ್ಯಾಯವಂತನೆಂದು ನಾನು ತೀರ್ಮಾನಿಸುತ್ತೇನೆ. ಈ ರೀತಿಯಾಗಿ ನಾನು ದೇವರ ಕಟ್ಟಳೆಗಳನ್ನು ಮತ್ತು ಬೋಧನೆಗಳನ್ನು ಜನರಿಗೆ ಬೋಧಿಸುತ್ತೇನೆ” ಅಂದನು.
17 ಆದರೆ ಮೋಶೆಯ ಮಾವನು ಅವನಿಗೆ, “ನೀನು ಹೀಗೆ ಮಾಡುತ್ತಿರುವುದು ಒಳ್ಳೆಯದಲ್ಲ. 18 ಈ ಕೆಲಸ ನೀನೊಬ್ಬನೇ ಮಾಡುವುದು ಬಹಳ ಪ್ರಯಾಸಕರ. ಇದು ನಿನ್ನನ್ನೂ ಆಯಾಸಗೊಳಿಸುತ್ತದೆ; ಜನರನ್ನೂ ಆಯಾಸಗೊಳಿಸುತ್ತದೆ. ನಿನ್ನೊಬ್ಬನಿಂದಲೇ ಈ ಕೆಲಸವನ್ನು ಮಾಡಲಾಗದು. 19 ಕೇಳು, ನಾನು ನಿನಗೆ ಕೆಲವು ಸಲಹೆಗಳನ್ನು ಕೊಡುವೆನು. ಯೆಹೋವನು ನಿನ್ನೊಡನೆ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ. ನೀನು ಮಾಡಬೇಕಾದದ್ದು ಇವೇ: ಜನರ ವ್ಯಾಜ್ಯಗಳನ್ನು ನೀನು ಕೇಳುವುದನ್ನು ಮುಂದುವರಿಸಬೇಕು; ಈ ಸಂಗತಿಗಳ ಬಗ್ಗೆ ನೀನು ದೇವರೊಂದಿಗೆ ಮಾತಾಡುವುದನ್ನೂ ಮುಂದುವರಿಸಬೇಕು; 20 ನೀನು ದೇವರ ಕಟ್ಟಳೆಗಳನ್ನು ಮತ್ತು ಬೋಧನೆಗಳನ್ನು ಜನರಿಗೆ ಬೋಧಿಸಬೇಕು; ನಿಬಂಧನೆಗಳನ್ನು ಉಲ್ಲಂಘಿಸದಂತೆ ಅವರನ್ನು ಎಚ್ಚರಿಸಬೇಕು; ಜೀವಿಸಲು ಸರಿಯಾದ ಮಾರ್ಗವನ್ನು ಅವರಿಗೆ ಬೋಧಿಸಬೇಕು; ಅವರು ಮಾಡಬೇಕಾದದ್ದನ್ನು ಅವರಿಗೆ ತಿಳಿಸಬೇಕು. 21 ಆದರೆ ನೀನು ಜನರೊಳಗೆ ದೇವಭಕ್ತರೂ ಲಂಚಮುಟ್ಟದವರೂ ಆಗಿರುವವರನ್ನು ಆರಿಸಿಕೊಳ್ಳಬೇಕು. ಅವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು. 22 ಈ ಅಧಿಕಾರಿಗಳು ಜನರಿಗೆ ನ್ಯಾಯತೀರಿಸಲಿ. ಬಹಳ ಪ್ರಾಮುಖ್ಯವಾದ ವ್ಯಾಜ್ಯವಿದ್ದರೆ, ತೀರ್ಮಾನಕ್ಕಾಗಿ ಅವರು ನಿನ್ನ ಬಳಿಗೆ ಬರಬಹುದು. ಆದರೆ ಇತರ ವ್ಯಾಜ್ಯಗಳನ್ನು ಅವರೇ ತೀರ್ಮಾನಿಸಿಕೊಳ್ಳಬಹುದು. ಈ ರೀತಿಯಾಗಿ ಮಾಡಿದರೆ, ಅದು ನಿನಗೆ ಸುಲಭವಾಗುವುದು. ಮಾತ್ರವಲ್ಲದೆ, ಈ ಜನರು ನಿನ್ನ ಕೆಲಸವನ್ನು ತಮ್ಮೊಳಗೆ ಹಂಚಿಕೊಳ್ಳುವರು. 23 ನೀನು ಈ ಸಂಗತಿಗಳನ್ನು ಮಾಡಿದರೆ, ಯೆಹೋವನ ಚಿತ್ತವಿದ್ದರೆ, ನೀನು ನಿನ್ನ ಕೆಲಸವನ್ನು ಮಾಡುತ್ತಾ ಮುಂದುವರಿಯಲು ಶಕ್ತನಾಗುವೆ ಮತ್ತು ಅದೇ ಸಮಯದಲ್ಲಿ ಜನರೆಲ್ಲರೂ ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಂಡು ಮನೆಗೆ ಹೋಗಬಹುದು” ಎಂದು ಹೇಳಿದನು.
24 ಮೋಶೆಯು ತನ್ನ ಮಾವನಾದ ಇತ್ರೋನನು ಹೇಳಿದಂತೆ ಮಾಡಿದನು. 25 ಮೋಶೆಯು ಇಸ್ರೇಲರೊಳಗಿಂದ ನೀತಿವಂತರನ್ನು ಆರಿಸಿಕೊಂಡು ಅವರನ್ನು ಹೀಗೆ ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ಮಾಡಿದನು 26 ಈ ಅಧಿಕಾರಿಗಳು ಜನರ ನ್ಯಾಯಾಧಿಪತಿಗಳಾಗಿದ್ದರು. ಜನರು ತಮ್ಮ ವ್ಯಾಜ್ಯಗಳನ್ನು ಈ ಅಧಿಕಾರಿಗಳ ಬಳಿಗೆ ಯಾವಾಗಲೂ ತರಬಹುದಾಗಿತ್ತು. ಮೋಶೆಯು ಬಹು ಪ್ರಾಮುಖ್ಯವಾದ ವ್ಯಾಜ್ಯಗಳನ್ನು ಮಾತ್ರ ತೀರ್ಮಾನಿಸುತ್ತಿದ್ದನು.
27 ಸ್ವಲ್ಪ ಸಮಯದ ನಂತರ ಮೋಶೆಯು ತನ್ನ ಮಾವನಾದ ಇತ್ರೋನನನ್ನು ಬೀಳ್ಕೊಟ್ಟನು; ಇತ್ರೋನನು ತನ್ನ ಸ್ವದೇಶಕ್ಕೆ ಹಿಂತಿರುಗಿಹೋದನು.
15 ಕೆಲವರು ತಮ್ಮಲ್ಲಿರುವ ಅಸೂಯೆಯಿಂದಲೂ ವೈಮನಸ್ಸಿನಿಂದಲೂ ಇನ್ನು ಕೆಲವರು ಸಹಾಯ ಮಾಡಬೇಕೆಂಬ ಉದ್ದೇಶದಿಂದಲೂ ಕ್ರಿಸ್ತನ ವಿಷಯವಾಗಿ ಬೋಧಿಸುತ್ತಾರೆ. 16 ಇವರು ತಮ್ಮಲ್ಲಿ ಪ್ರೀತಿಯಿರುವುದರಿಂದಲೇ ಜನರಿಗೆ ಬೋಧಿಸುತ್ತಾರೆ. ಸುವಾರ್ತೆಯನ್ನು ಪ್ರತಿಪಾದಿಸುವ ಕೆಲಸವನ್ನು ದೇವರು ನನಗೆ ಕೊಟ್ಟನೆಂಬುದು ಇವರಿಗೆ ಗೊತ್ತಿದೆ. 17 ಬೇರೆ ಕೆಲವರು ತಮ್ಮ ಸ್ವಾರ್ಥದ ದೆಸೆಯಿಂದ ಕ್ರಿಸ್ತನ ವಿಷಯವಾಗಿ ಬೋಧಿಸುತ್ತಾರೆ. ಅವರ ಸುವಾರ್ತಾಸೇವೆಯ ಉದ್ದೇಶವೇ ತಪ್ಪಾಗಿದೆ. ಸೆರೆಯಲ್ಲಿರುವ ನನಗೆ ತೊಂದರೆ ಮಾಡಬೇಕೆಂಬುದೇ ಅವರ ಅಪೇಕ್ಷೆ. 18 ಅವರು ನನಗೆ ತೊಂದರೆ ಮಾಡಿದರೂ ನಾನು ಚಿಂತಿಸುವುದಿಲ್ಲ. ಅವರ ಉದ್ದೇಶವು ಯಥಾರ್ಥವಾಗಿದ್ದರೂ ಯಥಾರ್ಥವಾಗಿಲ್ಲದಿದ್ದರೂ ನನಗದು ಮುಖ್ಯವಲ್ಲ.
ಅವರು ಕ್ರಿಸ್ತನ ವಿಷಯವಾಗಿ ಜನರಿಗೆ ಬೋಧಿಸುತ್ತಿರುವುದರಿಂದ ನಾನು ಉಲ್ಲಾಸಿಸುತ್ತೇನೆ, ಇನ್ನು ಮುಂದೆಯೂ ಉಲ್ಲಾಸಿಸುತ್ತೇನೆ. 19 ನೀವು ನನಗೋಸ್ಕರ ಪ್ರಾರ್ಥಿಸುತ್ತಿದ್ದೀರಿ ಮತ್ತು ಯೇಸು ಕ್ರಿಸ್ತನ ಆತ್ಮನು ನನಗೆ ಸಹಾಯ ಮಾಡುತ್ತಿದ್ದಾನೆ. ಆದ್ದರಿಂದ ನನ್ನ ಈ ಕಷ್ಟವು ನನಗೆ ರಕ್ಷಣೆಯನ್ನು ಉಂಟು ಮಾಡುವುದೆಂದು ನನಗೆ ಗೊತ್ತಿದೆ. 20 ನಾನು ಯಾವ ವಿಷಯದಲ್ಲಿಯೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ಧೈರ್ಯದಿಂದ ಇದ್ದೇನೆ. ನಾನು ಬದುಕಿದರೂ ಸರಿ, ಸತ್ತರೂ ಸರಿ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆ ಉಂಟಾಗಬೇಕೆಂಬುದೇ ನನ್ನ ಅಭಿಲಾಷೆ ಮತ್ತು ನಿರೀಕ್ಷೆ. 21 ನನಗಂತೂ ಬದುಕುವುದೆಂದರೆ ಕ್ರಿಸ್ತನೇ, ಸಾಯುವುದೆಂದರೆ ಲಾಭವೇ.
Kannada Holy Bible: Easy-to-Read Version. All rights reserved. © 1997 Bible League International