Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 119:41-48

41 ಯೆಹೋವನೇ, ನಿನ್ನ ಶಾಶ್ವತ ಪ್ರೀತಿಯನ್ನು ನನಗೆ ತೋರಿಸು.
    ನಿನ್ನ ವಾಗ್ದಾನದಂತೆ ನನ್ನನ್ನು ರಕ್ಷಿಸು.
42 ನನ್ನನ್ನು ಗೇಲಿಮಾಡುವ ಜನರಿಗೆ ಆಗ ನಾನು ಉತ್ತರ ಕೊಡುವೆನು.
    ಯೆಹೋವನೇ, ನಿನ್ನ ಮಾತುಗಳಲ್ಲೇ ನಾನು ಭರವಸವಿಟ್ಟಿದ್ದೇನೆ.
43 ನಿನ್ನ ಸತ್ಯೋಪದೇಶಗಳನ್ನು ನಾನು ಯಾವಾಗಲೂ ಮಾತಾಡುವಂತಾಗಲಿ.
    ನಿನ್ನ ಜ್ಞಾನದ ನಿರ್ಧಾರಗಳನ್ನೇ ನಾನು ಆಶ್ರಯಿಸಿಕೊಂಡಿದ್ದೇನೆ.
44 ನಿನ್ನ ಉಪದೇಶಗಳನ್ನು ಎಂದೆಂದಿಗೂ ಅನುಸರಿಸುವೆನು.
45 ಯಾಕೆಂದರೆ, ನಿನ್ನ ನಿಯಮಗಳಿಗೆ ವಿಧೇಯನಾಗಲು
    ನಾನು ಬಹಳವಾಗಿ ಪ್ರಯತ್ನಿಸುತ್ತಿರುವುದರಿಂದ ಯಾರ ಹಂಗಿಲ್ಲದೆ ನಡೆಯುವೆನು.
46 ರಾಜರುಗಳ ಮುಂದೆಯೂ
    ಯೆಹೋವನ ಒಡಂಬಡಿಕೆಯ ಕುರಿತು ಚರ್ಚಿಸುವೆನು, ನಾಚಿಕೆಪಡುವುದಿಲ್ಲ.
47 ನಿನ್ನ ಆಜ್ಞೆಗಳಲ್ಲಿ ಆನಂದಿಸುವೆನು;
    ಅವು ನನಗೆ ಇಷ್ಟವಾಗಿವೆ.
48 ನಿನ್ನ ಆಜ್ಞೆಗಳನ್ನು ಕೊಂಡಾಡುವೆನು, ಅವುಗಳನ್ನು ಧ್ಯಾನಿಸುವೆನು.
    ಅವು ನನಗೆ ಇಷ್ಟವಾಗಿವೆ.

ಅರಣ್ಯಕಾಂಡ 33:38-39

38 ಮಹಾಯಾಜಕನಾದ ಆರೋನನು ಯೆಹೋವನಿಂದ ಆಜ್ಞಾಪಿಸಲ್ಪಟ್ಟ ಹೋರ್ ಬೆಟ್ಟವನ್ನು ಹತ್ತಿದನು. ಇಸ್ರೇಲರು ಈಜಿಪ್ಟನ್ನು ಬಿಟ್ಟು ಹೊರಟ ನಂತರ ನಲವತ್ತನೆ ವರ್ಷದ ಐದನೆ ತಿಂಗಳಿನ ಮೊದಲನೆ ದಿನದಲ್ಲಿ ಆರೋನನು ಅಲ್ಲಿ ಪ್ರಾಣಬಿಟ್ಟನು. 39 ಆರೋನನು “ಹೋರ್” ಬೆಟ್ಟದಲ್ಲಿ ಸತ್ತಾಗ ಅವನಿಗೆ ನೂರಿಪ್ಪತ್ಮೂರು ವರ್ಷ ವಯಸ್ಸಾಗಿತ್ತು.

ಯಾಕೋಬನು 2:8-13

ಪವಿತ್ರ ಗ್ರಂಥದಲ್ಲಿ ಬರೆದಿರುವ, “ನಿನ್ನನ್ನು ಪ್ರೀತಿಸುವಂತೆ ಇತರರನ್ನೂ ಪ್ರೀತಿಸು”(A) ಎಂಬ ರಾಜಾಜ್ಞೆಗೆ ನೀವು ವಿಧೇಯರಾಗಿದ್ದರೆ ಸರಿಯಾದುದನ್ನೇ ಮಾಡುವವರಾಗಿದ್ದೀರಿ. ಆದರೆ ನೀವು ಒಬ್ಬನನ್ನು ಇನ್ನೊಬ್ಬನಿಗಿಂತ ಮುಖ್ಯನೆಂದು ಪರಿಗಣಿಸಿ ಪಕ್ಷಪಾತ ಮಾಡಿದರೆ ಪಾಪವನ್ನು ಮಾಡುವವರಾಗಿದ್ದೀರಿ. ದೇವರ ಧರ್ಮಶಾಸ್ತ್ರವನ್ನು ಉಲ್ಲಂಘಿಸಿ ದೋಷಿಗಳಾಗಿದ್ದೀರೆಂದು ಆ ರಾಜಾಜ್ಞೆಯು ನಿರೂಪಿಸುತ್ತದೆ.

10 ಒಬ್ಬನು ದೇವರ ಎಲ್ಲಾ ಆಜ್ಞೆಗಳನ್ನು ಅನುಸರಿಸುತ್ತಿರಬಹುದು. ಆದರೆ ಅವನು ಒಂದು ಆಜ್ಞೆಗೆ ಅವಿಧೇಯನಾದರೆ ಅವನು ಧರ್ಮಶಾಸ್ತ್ರದ ಎಲ್ಲಾ ಆಜ್ಞೆಗಳನ್ನು ಮೀರಿದನೆಂಬ ಅಪರಾಧಕ್ಕೆ ಗುರಿಯಾಗುವನು. 11 “ವ್ಯಭಿಚಾರ ಮಾಡಬಾರದು”(B) ಎಂದು ದೇವರು ಹೇಳಿದನು. “ಕೊಲ್ಲಬಾರದು”(C) ಎಂದೂ ಅದೇ ದೇವರು ಹೇಳಿದನು. ಹೀಗಿರಲಾಗಿ, ನೀವು ವ್ಯಭಿಚಾರವನ್ನು ಮಾಡದಿದ್ದರೂ ಯಾರನ್ನೇ ಆಗಲಿ ಕೊಂದರೆ, ದೇವರ ಇಡೀ ಧರ್ಮಶಾಸ್ತ್ರವನ್ನೇ ಉಲ್ಲಂಘಿಸಿದವರಾಗಿದ್ದೀರಿ.

12 ಜನರನ್ನು ಬಿಡುಗಡೆ ಮಾಡುವ ಧರ್ಮಶಾಸ್ತ್ರದಿಂದಲೇ ನಿಮಗೆ ತೀರ್ಪಾಗುವುದು. ನೀವು ಕೇಳುವ ಮತ್ತು ಮಾಡುವ ಪ್ರತಿಯೊಂದರಲ್ಲಿಯೂ ಇದನ್ನು ನೆನಪಿನಲ್ಲಿಟ್ಟುಕೊಳ್ಳಿ. 13 ಹೌದು, ಇತರರಿಗೆ ನೀವು ಕರುಣೆ ತೋರಬೇಕು. ಇಲ್ಲವಾದರೆ ದೇವರು ತೀರ್ಪು ನೀಡುವಾಗ ನಿಮಗೂ ಕರುಣೆ ತೋರನು. ಕರುಣೆ ತೋರುವವನು ದೇವರ ನ್ಯಾಯತೀರ್ಪಿನಲ್ಲಿ ಭಯವಿಲ್ಲದೆ ಇರುವನು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International