Revised Common Lectionary (Semicontinuous)
ಸ್ತುತಿಗೀತೆ. ರಚನೆಗಾರ: ಆಸಾಫ.
80 ಇಸ್ರೇಲನ್ನು ಕಾಯುವ ಕುರುಬನೇ,
ಯೋಸೇಫನ ಜನರನ್ನು ಕುರಿಮಂದೆಯಂತೆ ನಡೆಸುವಾತನೇ,
ಕೆರೂಬಿ ದೂತರ ಮೇಲೆ ರಾಜನಂತೆ ಕುಳಿತಿರುವಾತನೇ,
ಕಿವಿಗೊಡು. ನಾವು ನಿನ್ನನ್ನು ನೋಡುವಂತಾಗಲಿ.
2 ಇಸ್ರೇಲನ್ನು ಕಾಯುವ ಕುರುಬನೇ, ನಿನ್ನ ಮಹತ್ವವನ್ನು ಎಫ್ರಾಯೀಮನಿಗೂ ಬೆನ್ಯಾಮೀನನಿಗೂ ಮನಸ್ಸೆಗೂ ತೋರಿಸು.
ಬಂದು ನಮ್ಮನ್ನು ರಕ್ಷಿಸು.
3 ದೇವರೇ, ನಮ್ಮನ್ನು ಮತ್ತೆ ಸ್ವೀಕರಿಸು.
ನಮ್ಮನ್ನು ರಕ್ಷಿಸು! ನಮ್ಮನ್ನು ಸ್ವೀಕರಿಸು!
4 ಸೇನಾಧೀಶ್ವರನಾದ ಯೆಹೋವನೇ, ಇನ್ನೆಷ್ಟರವರೆಗೆ ನಮ್ಮ ಮೇಲೆ ಕೋಪದಿಂದಿರುವೆ?
ನಮ್ಮ ಪ್ರಾರ್ಥನೆಗಳಿಗೆ ಯಾವಾಗ ಕಿವಿಗೊಡುವೆ?
5 ನಿನ್ನ ಜನರಿಗೆ ಕಣ್ಣೀರನ್ನು ಆಹಾರವನ್ನಾಗಿ ಮಾಡಿರುವೆ.
ನಿನ್ನ ಜನರಿಗೆ ಕಣ್ಣೀರು ತುಂಬಿರುವ ಪಾತ್ರೆಗಳನ್ನು ಕೊಟ್ಟಿರುವೆ.
ಕಣ್ಣೀರೇ ಅವರಿಗೆ ಕುಡಿಯುವ ನೀರಾಗಿದೆ.
6 ಸುತ್ತಲಿನ ಜನಾಂಗಗಳಿಗೆ ನಮ್ಮನ್ನು ಯುದ್ಧಕ್ಕೆ ಕಾರಣವನ್ನಾಗಿ ಮಾಡಿರುವೆ.
ಶತ್ರುಗಳು ನಮ್ಮನ್ನು ನೋಡಿ ನಗುವರು.
7 ಸೇನಾಧೀಶ್ವರನಾದ ದೇವರೇ, ನಮ್ಮನ್ನು ಮತ್ತೆ ಸ್ವೀಕರಿಸಿಕೊ.
ಪ್ರಸನ್ನಮುಖದಿಂದ ನಮ್ಮ ಕಡೆಗೆ ನೋಡಿ ನಮ್ಮನ್ನು ರಕ್ಷಿಸು.
17 ನೀನು ಆರಿಸಿಕೊಂಡಿರುವಾತನ[a] ಕಡೆಗೆ ಕೈಚಾಚಿ ಸಹಾಯ ಮಾಡು.
ನೀನು ಬೆಳೆಸಿದ ಜನರ[b] ಕಡೆಗೆ ಕೈಚಾಚು.
18 ಆಗ ನಾವು ನಿನ್ನನ್ನು ಎಂದಿಗೂ ತ್ಯಜಿಸುವುದಿಲ್ಲ.
ನಮ್ಮನ್ನು ಬದುಕಿಸು.
ನಾವು ಬದುಕುವಂತೆ ಮಾಡು, ಆಗ ನಾವು ನಿನ್ನನ್ನು ಆರಾಧಿಸುವೆವು.
19 ಸೇನಾಧೀಶ್ವರನಾದ ಯೆಹೋವ ದೇವರೇ, ನಮ್ಮನ್ನು ಮತ್ತೆ ಸ್ವೀಕರಿಸಿಕೊ,
ಪ್ರಸನ್ನಮುಖದಿಂದ ನಮ್ಮ ಕಡೆಗೆ ನೋಡಿ ನಮ್ಮನ್ನು ರಕ್ಷಿಸು.
13 ಆದರೆ ಆ ಸಮಯದಲ್ಲಿ ಜೆರುಸಲೇಮಿನಲ್ಲಿ ವಾಸಿಸುವ ಜನರಿಗೂ ದಾವೀದನ ಕುಟುಂಬದವರಿಗೂ ಒಂದು ಹೊಸ ಬುಗ್ಗೆಯ ನೀರು ಚಿಮ್ಮುವದು. ಆ ಬುಗ್ಗೆಯು ಜನರ ಪಾಪಗಳನ್ನು ತೊಳೆದು ಶುದ್ಧಮಾಡುವದಕ್ಕಾಗಿ ಇರುವದು.
ಇನ್ನು ಮುಂದೆ ಸುಳ್ಳು ಪ್ರವಾದಿಗಳಿರುವದಿಲ್ಲ
2 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಆ ಸಮಯದಲ್ಲಿ ಈ ಪ್ರಪಂಚದಲ್ಲಿರುವ ವಿಗ್ರಹಗಳನ್ನೆಲ್ಲಾ ನಾನು ತೆಗೆದುಬಿಡುವೆನು. ಜನರು ಅವುಗಳ ಹೆಸರನ್ನು ತಮ್ಮ ನೆನಪಿಗೆ ತಾರರು. ಸುಳ್ಳು ಪ್ರವಾದಿಗಳನ್ನೂ ಅಶುದ್ಧ ಆತ್ಮಗಳನ್ನೂ ನಾನು ಭೂಮಿಯ ಮೇಲಿಂದ ತೆಗೆದುಬಿಡುವೆನು. 3 ಯಾವನಾದರೂ ಪ್ರವಾದಿಸುವದನ್ನು ಮಂದುವರಿಸಿದರೆ ಅವನು ಶಿಕ್ಷೆಗೆ ಗುರಿಯಾಗುವನು. ‘ನೀನು ಯೆಹೋವನ ಹೆಸರಿನಲ್ಲಿ ಸುಳ್ಳನ್ನು ಹೇಳಿರುವೆ. ಆದ್ದರಿಂದ ನೀನು ಸಾಯಲೇಬೇಕು’ ಎಂದು ಅವನ ಸ್ವಂತ ತಂದೆತಾಯಿಗಳು ಅವನಿಗೆ ಹೇಳುವರು. ಅವನ ಸ್ವಂತ ತಂದೆ ತಾಯಿಗಳು ಅವನು ಸುಳ್ಳು ಪ್ರವಾದನೆ ಹೇಳಿದ್ದಕ್ಕೆ ಅವನನ್ನು ಖಡ್ಗದಿಂದ ಕೊಲ್ಲಿಸುವರು. 4 ಆ ಸಮಯದಲ್ಲಿ ಪ್ರವಾದಿಗಳು ತಮ್ಮ ದರ್ಶನ, ಪ್ರವಾದನೆಗಳಿಗಾಗಿ ನಾಚಿಕೊಳ್ಳುವರು. ತಾವು ಪ್ರವಾದಿಗಳೆಂದು ತೋರಿಸಿಕೊಳ್ಳಲು ಧರಿಸುವ ಗಡುಸಾದ ಬಟ್ಟೆಗಳನ್ನು ಧರಿಸಿಕೊಳ್ಳುವದಿಲ್ಲ. ಅವರು ಪ್ರವಾದನೆಗಳೆಂದು ಹೇಳುವ ತಮ್ಮ ಸುಳ್ಳುಗಳಿಂದ ಜನರನ್ನು ಮೋಸಪಡಿಸುವದಿಲ್ಲ. 5 ಅವನು, ‘ನಾನು ಪ್ರವಾದಿಯಲ್ಲ, ನಾನೊಬ್ಬ ರೈತ. ನಾನು ಬಾಲ್ಯಪ್ರಾಯದಿಂದಲೇ ರೈತನಾಗಿದ್ದೇನೆ’ ಎಂದು ಹೇಳುವನು. 6 ಆದರೆ ಬೇರೆ ಜನರು, ‘ಹಾಗಾದರೆ ನಿನ್ನ ಕೈಯಲ್ಲಿ ಗಾಯಗಳೇನು?’ ಎಂದು ಕೇಳಿದಾಗ ಅವನು, ‘ನನ್ನ ಸ್ನೇಹಿತರ ಮನೆಯಲ್ಲಿ ನನಗೆ ಏಟು ಬಿತ್ತು’ ಎಂದು ಅನ್ನುವನು.”
7 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: “ಖಡ್ಗವೇ, ಕುರುಬನನ್ನು ಹೊಡೆ. ನನ್ನ ಸ್ನೇಹಿತನಿಗೆ ಹೊಡೆ. ಕುರುಬನನ್ನು ಹೊಡೆ. ಆಗ ಕುರಿಗಳು ಚದರಿಹೋಗುವವು. ಮತ್ತು ನಾನು ಆ ಚಿಕ್ಕವುಗಳನ್ನು ಶಿಕ್ಷಿಸುವೆನು. 8 ದೇಶದ ಮೂರನೇ ಎರಡು ಪಾಲಷ್ಟು ಜನರು ಗಾಯಗೊಂಡು ಸಾಯುವರು. ಒಂದು ಪಾಲಷ್ಟು ಜನರು ಬದುಕಿ ಉಳಿಯುವರು. 9 ಆ ಬಳಿಕ ನಾನು ಉಳಿದವರನ್ನು ಪರೀಕ್ಷಿಸುವೆನು. ಅವರಿಗೆ ಅನೇಕ ಸಂಕಟ ಬರಮಾಡುವೆನು. ಅದು ಬೆಳ್ಳಿಯನ್ನು ಬೆಂಕಿಯಲ್ಲಿ ಪರೀಕ್ಷಿಸಿದಂತಿರುವುದು. ಒಬ್ಬನು ಬಂಗಾರವನ್ನು ಪರೀಕ್ಷಿಸುವಂತೆ ನಾನು ಅವರನ್ನು ಪರೀಕ್ಷಿಸುವೆನು. ಆಗ ಅವರು ಸಹಾಯ ಮಾಡುವಂತೆ ನನಗೆ ಮೊರೆಯಿಡುವರು ಮತ್ತು ನಾನು ಅವರಿಗೆ ಉತ್ತರಕೊಡುವೆನು. ಆಗ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಅದಕ್ಕವರು, ‘ಯೆಹೋವನು ನಮ್ಮ ದೇವರು’ ಎಂದು ಹೇಳುವರು.”
ಮೂರು ಮಂದಿ ದೇವದೂತರು
6 ನಂತರ ಇನ್ನೊಬ್ಬ ದೇವದೂತನು ವಾಯುಮಂಡಲದಲ್ಲಿ ಅತಿ ಎತ್ತರದಲ್ಲಿ ಹಾರುತ್ತಿರುವುದನ್ನು ನಾನು ನೋಡಿದೆನು. ಭೂಮಿಯ ಮೇಲೆ ವಾಸಿಸುವ ಸಕಲ ಜನಾಂಗ, ಕುಲ, ಪ್ರಜೆ, ಭಾಷೆಗಳ ಜನರಿಗೆಲ್ಲಾ ಬೋಧಿಸುವುದಕ್ಕೆ ನಿತ್ಯವಾದ ಸುವಾರ್ತೆಯು ಆ ದೇವದೂತನಲ್ಲಿತ್ತು. 7 ಆ ದೇವದೂತನು ಗಟ್ಟಿಯಾದ ಧ್ವನಿಯಲ್ಲಿ, “ದೇವರಿಗೆ ಭಯಪಡಿರಿ. ಆತನನ್ನು ಸ್ತುತಿಸಿರಿ. ಜನರಿಗೆಲ್ಲ ದೇವರು ತೀರ್ಪು ನೀಡುವ ಸಮಯವು ಹತ್ತಿರ ಬಂದಿದೆ. ದೇವರನ್ನು ಆರಾಧಿಸಿರಿ. ಪರಲೋಕವನ್ನೂ ಭೂಮಿಯನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಸೃಷ್ಟಿಸಿದವನು ಆತನೇ” ಎಂದು ಹೇಳಿದನು.
8 ನಂತರ ಎರಡನೆಯ ದೇವದೂತನು ಮೊದಲನೆಯ ದೇವದೂತನನ್ನು ಹಿಂಬಾಲಿಸುತ್ತಾ, “ಅವಳು ನಾಶವಾದಳು! ಬಾಬಿಲೋನ್ ಎಂಬ ನಗರಿಯು ನಾಶವಾದಳು! ಆಕೆಯು ಸಕಲ ಜನಾಂಗಗಳಿಗೆ ತನ್ನ ಜಾರತ್ವವೆಂಬ ಮತ್ತು ದೇವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಸಿದಳು” ಎಂದು ಹೇಳಿದನು.
9 ಮೂರನೆಯ ದೇವದೂತನು ಮೊದಲ ಇಬ್ಬರು ದೇವದೂತರನ್ನು ಹಿಂಬಾಲಿಸಿದನು. ಈ ಮೂರನೆಯ ದೇವದೂತನು ಗಟ್ಟಿಯಾದ ಧ್ವನಿಯಲ್ಲಿ ಹೀಗೆ ಹೇಳಿದನು: “ಮೃಗವನ್ನೂ ಮೃಗದ ವಿಗ್ರಹವನ್ನೂ ಆರಾಧಿಸುವವನಿಗೆ ಮತ್ತು ಮೃಗದ ಗುರುತನ್ನು ಹಣೆಯ ಮೇಲಾಗಲಿ ಇಲ್ಲವೆ ತನ್ನ ಕೈಗಳ ಮೇಲಾಗಲಿ ಹಾಕಿಸಿಕೊಳ್ಳುವವನಿಗೆ ಕೇಡಾಗುವುದು. 10 ಅವನು ದೇವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಯುತ್ತಾನೆ. ದೇವರ ಕೋಪವೆಂಬ ಬಟ್ಟಲಿನಲ್ಲಿ ಈ ದ್ರಾಕ್ಷಾರಸವನ್ನು ಅದರ ಪೂರ್ಣಶಕ್ತಿಯ ಸಮೇತವಾಗಿ ತಯಾರಿಸಲಾಗಿದೆ. ಅವನನ್ನು ಪರಿಶುದ್ಧ ದೇವದೂತರ ಮತ್ತು ಕುರಿಮರಿಯಾದಾತನ ಮುಂದೆ ಉರಿಯುವ ಗಂಧಕದಿಂದ ಯಾತನೆಪಡಿಸಲಾಗುವುದು. 11 ಅವರ ಯಾತನೆಯೆಂಬ ಹೊಗೆಯು ಸದಾ ಏಳುತ್ತಲೇ ಇರುವುದು. ಮೃಗವನ್ನು ಮತ್ತು ಅದರ ವಿಗ್ರಹವನ್ನು ಆರಾಧಿಸುವ ಮತ್ತು ಅದರ ಹೆಸರನ್ನು ಗುರುತು ಹಾಕಿಸಿಕೊಳ್ಳುವ ಜನರಿಗೆ ಹಗಲಲ್ಲೂ ರಾತ್ರಿಯಲ್ಲೂ ವಿಶ್ರಾಂತಿಯೆಂಬುದೇ ಇರುವುದಿಲ್ಲ.” 12 ಈ ಪರಿಸ್ಥಿತಿಯಲ್ಲಿ, ದೇವರ ಪರಿಶುದ್ಧ ಜನರು ತಾಳ್ಮೆಯಿಂದಿರಬೇಕು. ಅವರು ದೇವರ ಆಜ್ಞೆಗಳಿಗೆ ವಿಧೇಯರಾಗಿರಬೇಕು ಮತ್ತು ಯೇಸುವಿನಲ್ಲಿ ನಂಬಿಕೆಯನ್ನಿಟ್ಟಿರಬೇಕು.
13 ನಂತರ ನಾನು ಪರಲೋಕದಿಂದ ಒಂದು ಧ್ವನಿಯನ್ನು ಕೇಳಿದೆನು. ಆ ಧ್ವನಿಯು ಹೀಗೆ ಹೇಳಿತು: “ಇದನ್ನು ಬರೆ: ಇಂದಿನಿಂದ ಪ್ರಭುವಿನ ಭಕ್ತರಾಗಿದ್ದು ಸಾಯುವಂತಹ ಜನರು ಧನ್ಯರು.”
“ಹೌದು, ಇದು ನಿಜ. ಆ ಜನರು ತಮ್ಮ ಪ್ರಯಾಸದ ಕೆಲಸವನ್ನು ಮುಗಿಸಿದವರಾಗಿ ವಿಶ್ರಾಂತಿ ಪಡೆಯುತ್ತಾರೆ. ಅವರು ಮಾಡಿದುದೆಲ್ಲವೂ ಅವರೊಂದಿಗೇ ಇರುತ್ತದೆ” ಎಂದು ಪವಿತ್ರಾತ್ಮನು ಹೇಳುತ್ತಾನೆ.
Kannada Holy Bible: Easy-to-Read Version. All rights reserved. © 1997 Bible League International