Revised Common Lectionary (Semicontinuous)
ರಚನೆಗಾರ: ದಾವೀದ.
27 ಯೆಹೋವನೇ, ನೀನೇ ನನಗೆ ಬೆಳಕೂ ರಕ್ಷಕನೂ ಆಗಿರುವೆ.
ನಾನು ಯಾರಿಗೂ ಭಯಪಡಬೇಕಿಲ್ಲ!
ಯೆಹೋವನೇ, ನನ್ನ ಪ್ರಾಣಕ್ಕೆ ಆಶ್ರಯಸ್ಥಾನವೂ ನೀನೇ.
ಆದ್ದರಿಂದ ನಾನು ಯಾರಿಗೂ ಹೆದರುವುದಿಲ್ಲ!
2 ದುಷ್ಟರು ನನ್ನನ್ನು ಕೊಲ್ಲಲು ಆಕ್ರಮಣಮಾಡುವಾಗ
ತಾವೇ ಮುಗ್ಗರಿಸಿ ಬೀಳುವರು.
3 ಮಹಾಸೈನ್ಯವೇ ನನಗೆ ಮುತ್ತಿಗೆ ಹಾಕಿದರೂ ನಾನು ಭಯಪಡುವುದಿಲ್ಲ.
ಸೈನಿಕರು ನನ್ನ ಮೇಲೆ ಆಕ್ರಮಣ ಮಾಡಿದರೂ ನಾನು ಹೆದರುವುದಿಲ್ಲ.
ಯಾಕೆಂದರೆ ನಾನು ಯೆಹೋವನಲ್ಲಿ ಭರವಸವಿಟ್ಟಿದ್ದೇನೆ.
4 ನನ್ನ ಜೀವಮಾನವೆಲ್ಲಾ
ಯೆಹೋವನ ಆಲಯದಲ್ಲಿ ವಾಸಿಸುತ್ತಾ
ಆತನ ಪ್ರಸನ್ನತೆಯನ್ನು ವೀಕ್ಷಿಸುತ್ತಾ
ಆತನ ಮಾರ್ಗದರ್ಶನವನ್ನು ಎದುರುನೋಡುತ್ತಾ ಇರಬೇಕೆಂಬ
ಒಂದೇ ಒಂದು ಕೋರಿಕೆಯನ್ನು ಯೆಹೋವನಲ್ಲಿ ಕೇಳಿಕೊಂಡು ಅದನ್ನೇ ಎದುರುನೋಡುತ್ತಿದ್ದೇನೆ.
5 ನಾನು ಅಪಾಯದಲ್ಲಿರುವಾಗ ಯೆಹೋವನು ನನ್ನನ್ನು ಸಂರಕ್ಷಿಸುತ್ತಾನೆ;
ತನ್ನ ಗುಡಾರದಲ್ಲಿ ನನ್ನನ್ನು ಅಡಗಿಸುತ್ತಾನೆ.
ಸುರಕ್ಷಿತವಾದ ಸ್ಥಳಕ್ಕೆ ನನ್ನನ್ನು ಕೊಂಡೊಯ್ಯುವನು.
6 ವೈರಿಗಳು ನನಗೆ ಮುತ್ತಿಗೆ ಹಾಕಿದ್ದರೂ ಅವರನ್ನು ಸೋಲಿಸಲು ಯೆಹೋವನು ನನಗೆ ಸಹಾಯಮಾಡುವನು!
ಆಗ ನಾನು ಆತನ ಗುಡಾರದಲ್ಲಿ ಉತ್ಸಾಹ ಧ್ವನಿಯೊಡನೆ ಯಜ್ಞಗಳನ್ನು ಅರ್ಪಿಸುವೆನು.
ವಾದ್ಯಗಳನ್ನು ನುಡಿಸುತ್ತಾ ಆತನನ್ನು ಕೊಂಡಾಡುವೆನು.
7 ಯೆಹೋವನೇ, ನನ್ನ ಸ್ವರವನ್ನು ಕೇಳಿ ನನಗೆ ಉತ್ತರಿಸು.
ನನ್ನನ್ನು ಕರುಣಿಸು.
8 ಯೆಹೋವನೇ, ನಾನು ನಿನ್ನೊಂದಿಗೆ ಹೃದಯಪೂರ್ವಕವಾಗಿ ಮಾತನಾಡಬೇಕೆಂದಿದ್ದೇನೆ.
ದೇವರೇ, ನಾನು ನಿನ್ನ ಸನ್ನಿಧಿಗೆ ಬರುತ್ತೇನೆ.
9 ಯೆಹೋವನೇ, ನನಗೆ ವಿಮುಖನಾಗಬೇಡ:
ನಿನ್ನ ಸೇವಕನನ್ನು ಕೋಪದಿಂದ ತಳ್ಳಿಬಿಡಬೇಡ.
ನನ್ನ ದೇವರೇ, ನನ್ನ ರಕ್ಷಕನು ನೀನೇ.
ನನ್ನನ್ನು ಕೈ ಬಿಡಬೇಡ! ತೊರೆದುಬಿಡಬೇಡ!
10 ತಂದೆತಾಯಿಗಳು ನನ್ನನ್ನು ತೊರೆದುಬಿಟ್ಟರೇನು;
ಯೆಹೋವನು ನನ್ನನ್ನು ಸೇರಿಸಿಕೊಳ್ಳುವನು.
11 ಯೆಹೋವನೇ, ನನಗೆ ವೈರಿಗಳಿರುವುದರಿಂದ ನಿನ್ನ ಮಾರ್ಗವನ್ನು ನನಗೆ ಉಪದೇಶಿಸಿ
ನಿನ್ನ ಚಿತ್ತಾನುಸಾರವಾಗಿ ನನ್ನನ್ನು ನಡೆಸು.
12 ವೈರಿಗಳು ನನ್ನ ಮೇಲೆ ಆಕ್ರಮಣ ಮಾಡಿದ್ದಾರೆ.
ನನಗೆ ಕೇಡಾಗಲೆಂದು ಸುಳ್ಳುಗಳನ್ನು ಹೇಳಿದ್ದಾರೆ.
ಯೆಹೋವನೇ, ಇಂಥ ವೈರಿಗಳ ಕೈಗೆ ನನ್ನನ್ನು ಕೊಡಬೇಡ.
13 ಯೆಹೋವನ ಒಳ್ಳೆಯತನವನ್ನು
ನಾನು ಸಾಯುವುದಕ್ಕಿಂತ ಮುಂಚೆ[a] ನೋಡುತ್ತೇನೆ ಎಂಬ ದೃಢನಂಬಿಕೆ ನನ್ನಲ್ಲಿದೆ.
14 ಯೆಹೋವನ ಸಹಾಯಕ್ಕಾಗಿ ಕಾದುಕೊಂಡಿರಿ!
ಬಲವಾಗಿಯೂ ಧೈರ್ಯವಾಗಿಯೂ ಇರಿ!
ಯೆಹೋವನ ಸಹಾಯಕ್ಕಾಗಿ ಕಾದುಕೊಂಡಿರಿ!
ಯೆಹೂದವು ದೇವರಿಗೆ ನಂಬಿಗಸ್ತವಾಗಿಲ್ಲ
10 ನಮಗೆಲ್ಲರಿಗೂ ಒಬ್ಬನೇ ತಂದೆಯಾದ ದೇವರು. ಆ ದೇವರೇ ನಮ್ಮೆಲ್ಲರನ್ನು ಉಂಟುಮಾಡಿದನು. ಹೀಗಿರುವಾಗ ಜನರು ತಮ್ಮ ಸಹೋದರರನ್ನು ಯಾಕೆ ಮೋಸಪಡಿಸುತ್ತಾರೆ? ಒಡಂಬಡಿಕೆಯನ್ನು ಅವರು ಮಾನ್ಯತೆ ಮಾಡುವವರೆಂದು ಜನರಿಗೆ ತೋರಿಸುವದಿಲ್ಲ. ತಮ್ಮ ಪೂರ್ವಿಕರು ಯೆಹೋವನೊಂದಿಗೆ ಮಾಡಿದ್ದ ಒಡಂಬಡಿಕೆಯನ್ನು ಅವರು ಮಾನ್ಯತೆ ಮಾಡಲಿಲ್ಲ. 11 ಯೆಹೂದದ ಜನರು ಬೇರೆ ಜನರಿಗೆ ಮೋಸ ಮಾಡಿದರು. ಜೆರುಸಲೇಮಿನಲ್ಲಿಯೂ ಇಸ್ರೇಲಿನಲ್ಲಿಯೂ ಇರುವ ಜನರು ಭಯಂಕರ ಕೃತ್ಯಗಳನ್ನು ಮಾಡಿದರು. ದೇವರು ತನ್ನ ಆಲಯವನ್ನು ಪ್ರೀತಿಸುತ್ತಾನೆ. ಆದರೆ ಯೆಹೂದದ ಜನರು ಗೊತ್ತಿಲ್ಲದ ದೇವತೆಗಳನ್ನು ಪೂಜಿಸಲು ಪ್ರಾರಂಭಿಸುತ್ತಾರೆ. 12 ಅಂಥಾ ಜನರನ್ನು ಯೆಹೋವನು ಯೆಹೂದ ವಂಶದಿಂದಲೇ ತೆಗೆದುಹಾಕುವನು. ಅವರು ಯೆಹೋವನಿಗೆ ಕಾಣಿಕೆಗಳನ್ನು ತೆಗೆದುಕೊಂಡು ಬರಬಹುದು. ಆದರೆ ಅದು ಏನೂ ಪ್ರಯೋಜನವಿಲ್ಲ. 13 ನೀವು ಅತ್ತು ಗೋಳಾಡಿ ಯೆಹೋವನ ವೇದಿಕೆಯನ್ನು ಕಣ್ಣೀರಿನಿಂದ ತೋಯಿಸಿದರೂ ಪ್ರಯೋಜನವಿಲ್ಲ. ಯೆಹೋವನು ನಿಮ್ಮ ಕಾಣಿಕೆಯನ್ನು ಸ್ವೀಕರಿಸುವುದಿಲ್ಲ. ನಿಮ್ಮ ಕಾಣಿಕೆಗಳನ್ನು ಆತನು ಮೆಚ್ಚುವವನಲ್ಲ.
14 “ನಮ್ಮ ಕಾಣಿಕೆಗಳನ್ನು ಯೆಹೋವನು ಏಕೆ ಸ್ವೀಕರಿಸುವುದಿಲ್ಲ?” ಎಂದು ನೀವು ಕೇಳಬಹುದು. ಯಾಕೆಂದರೆ ನಿಮ್ಮ ಪಾಪಕೃತ್ಯಗಳನ್ನು ಆತನು ನೋಡಿರುತ್ತಾನೆ. ಅವುಗಳಿಗೆ ವಿರೋಧವಾಗಿ ಆತನೇ ಸಾಕ್ಷಿಯಾಗಿರುತ್ತಾನೆ. ನಿಮ್ಮ ಹೆಂಡತಿಯರನ್ನು ನೀವು ಮೋಸಗೊಳಿಸಿದ್ದನ್ನು ಆತನು ನೋಡಿರುತ್ತಾನೆ. ನೀವು ಆಕೆಯನ್ನು ನಿಮ್ಮ ಯೌವನ ಕಾಲದಲ್ಲಿ ಹೆಂಡತಿಯನ್ನಾಗಿ ಮಾಡಿಕೊಂಡಿರುತ್ತೀರಿ. ಆಕೆಯು ನಿಮ್ಮ ಆಪ್ತ ಸ್ನೇಹಿತೆಯಾಗಿದ್ದಳು. ನೀವಿಬ್ಬರೂ ಮಾತುಕೊಟ್ಟಿರಿ. ಆಕೆ ನಿಮ್ಮ ಹೆಂಡತಿಯಾದಳು. ಆದರೆ ನೀವು ಅವಳಿಗೆ ಅಪನಂಬಿಗಸ್ಥರಾದಿರಿ. 15 ದೇವರ ಇಚ್ಫೆಗನುಸಾರವಾಗಿ ಗಂಡಹೆಂಡತಿಯರು ದೇಹದಲ್ಲಿಯೂ ಆತ್ಮದಲ್ಲಿಯೂ ಒಂದಾಗಿರಬೇಕು. ಆಗ ಅವರ ಮಕ್ಕಳೂ ಪರಿಶುದ್ಧರಾಗಿರುವರು. ಆದ್ದರಿಂದ ಆತ್ಮಿಕ ಅನ್ಯೋನ್ಯತೆಯನ್ನು ಕಾಪಾಡಿಕೊಳ್ಳಿ. ನಿಮ್ಮ ಹೆಂಡತಿಯರಿಗೆ ಮೋಸಮಾಡಬೇಡಿ. ಯಾಕೆಂದರೆ ಯೌವನ ಪ್ರಾಯದಿಂದಲೂ ಆಕೆ ನಿಮ್ಮ ಹೆಂಡತಿಯಾಗಿದ್ದಾಳೆ.
16 ಇಸ್ರೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, “ವಿವಾಹವಿಚ್ಪೇದನೆಯನ್ನು ನಾನು ಹಗೆ ಮಾಡುತ್ತೇನೆ. ಮತ್ತು ಮನುಷ್ಯನು ಮಾಡುವ ದುಷ್ಕೃತ್ಯವನ್ನು ನಾನು ಹಗೆ ಮಾಡುತ್ತೇನೆ. ಆದ್ದರಿಂದ ನಿಮ್ಮ ಆತ್ಮೀಯ ಒಗ್ಗಟ್ಟನ್ನು ಕಾಪಾಡಿಕೊಳ್ಳಿರಿ. ನಿಮ್ಮ ಹೆಂಡತಿಯರಿಗೆ ಮೋಸ ಮಾಡಬೇಡಿರಿ.”
ನ್ಯಾಯತೀರ್ಪಿನ ವಿಶೇಷವಾದ ಕಾಲ
17 ನೀವು ತಪ್ಪಾದ ವಿಷಯಗಳನ್ನು ಬೋಧಿಸಿದ್ದೀರಿ. ಅಂಥಾ ದುರ್ಬೋಧನೆಯು ಯೆಹೋವನನ್ನು ದುಃಖಗೊಳಿಸಿದೆ. ಯೆಹೋವನು ದುಷ್ಟರನ್ನು ಪ್ರೀತಿಸುತ್ತಾನೆ ಎಂದು ಜನರಿಗೆ ಬೋಧಿಸಿದ್ದೀರಿ. ಅಂಥಾ ಜನರನ್ನು ಯೆಹೋವನು ಒಳ್ಳೆಯವರೆಂದು ಕರೆಯುತ್ತಾನೆ ಎಂದು ನೀವು ಜನರಿಗೆ ಕಲಿಸಿದ್ದೀರಿ. ಅಲ್ಲದೆ ಪಾಪಮಾಡುವ ಜನರನ್ನು ಯೆಹೋವನು ಶಿಕ್ಷಿಸುವದಿಲ್ಲವೆಂದೂ ನೀವು ಹೇಳಿದ್ದೀರಿ.
3 ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ನನ್ನ ಮಾರ್ಗವನ್ನು ಸಿದ್ಧಮಾಡಲು ನಾನು ಮುಂದೂತನನ್ನು ಕಳುಹಿಸುತ್ತೇನೆ. ನೀವು ಹುಡುಕುತ್ತಿರುವ ಧಣಿಯು ತನ್ನ ಆಲಯಕ್ಕೆ ಬರುತ್ತಾನೆ. ಹೌದು, ನಿಮಗೆ ಬೇಕಾಗಿರುವ ಹೊಸ ಒಡಂಬಡಿಕೆಯ ಸಂದೇಶಕನು ನಿಜವಾಗಿಯೂ ಬರುತ್ತಿದ್ದಾನೆ.
ಜಕರೀಯ ಮತ್ತು ಎಲಿಜಬೇತ್
5 ಹೆರೋದನು[a] ಜುದೇಯವನ್ನು ಆಳುತ್ತಿದ್ದ ಕಾಲದಲ್ಲಿ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಜಕರೀಯನು ಅಬೀಯನ ವರ್ಗಕ್ಕೆ[b] ಸೇರಿದವನು. ಜಕರೀಯನ ಹೆಂಡತಿ ಆರೋನನ ಕುಟುಂಬದವಳು. ಆಕೆಯ ಹೆಸರು ಎಲಿಜಬೇತ್. 6 ಜಕರೀಯನು ಮತ್ತು ಎಲಿಜಬೇತಳು ನಿಜವಾಗಿಯೂ ದೇವರ ದೃಷ್ಟಿಯಲ್ಲಿ ಒಳ್ಳೆಯವರಾಗಿದ್ದರು. ಪ್ರಭುವಿನ (ದೇವರ) ಆಜ್ಞೆಗಳನ್ನೆಲ್ಲಾ ಕೈಕೊಂಡು ನಡೆಯುತ್ತಿದ್ದ ಅವರು, ಅದೇರೀತಿ ಬಾಳಲು ಇತರರಿಗೂ ಉಪದೇಶಿಸುತ್ತಿದ್ದರು. ಅವರು ತಪ್ಪಿಲ್ಲದವರಾಗಿದ್ದರು. 7 ಅವರಿಗೆ ಮಕ್ಕಳಿರಲಿಲ್ಲ. ಎಲಿಜಬೇತಳು ಬಂಜೆಯಾಗಿದ್ದಳು; ಮತ್ತು ಅವರಿಬ್ಬರೂ ಬಹಳ ಮುಪ್ಪಿನವರಾಗಿದ್ದರು.
8 ಒಮ್ಮೆ ತನ್ನ ವರ್ಗದ ಸರದಿ ಬಂದಾಗ, ಜಕರೀಯನು ದೇವರ ಸನ್ನಿಧಿಯಲ್ಲಿ ಯಾಜಕಸೇವೆ ಸಲ್ಲಿಸುತ್ತಿದ್ದನು. 9 ಯಾಜಕರು ಧೂಪವನು ಅರ್ಪಿಸುವುದಕ್ಕಾಗಿ ತಮ್ಮ ಸಂಪ್ರದಾಯದ ಪ್ರಕಾರ ಚೀಟಿಹಾಕಿ ಒಬ್ಬ ಯಾಜಕನನ್ನು ಆರಿಸುತ್ತಿದ್ದರು. ಈ ಸಲ ಅದು ಜಕರೀಯನ ಪಾಲಿಗೆ ಬಂದಿತು. ಆದ್ದರಿಂದ ಜಕರೀಯನು ಧೂಪ ಅರ್ಪಿಸುವುದಕ್ಕಾಗಿ ಪ್ರಭುವಿನ ಆಲಯದೊಳಗೆ ಹೋದನು. 10 ಹೊರಗಡೆ ಬಹು ಜನರಿದ್ದರು. ಧೂಪವನ್ನರ್ಪಿಸುತ್ತಿದ್ದ ಸಮಯದಲ್ಲಿ ಅವರು ಪ್ರಾರ್ಥಿಸುತ್ತಿದ್ದರು.
11 ಆಗ, ಧೂಪಪೀಠದ ಬಲಗಡೆಯಲ್ಲಿ, ಪ್ರಭುವಿನ ದೂತನೊಬ್ಬನು ಬಂದು ಜಕರೀಯನ ಮುಂದೆ ನಿಂತನು. 12 ಅವನು ದೇವದೂತನನ್ನು ನೋಡಿ ಗಲಿಬಿಲಿಗೊಂಡು ಬಹು ಭಯಪಟ್ಟನು. 13 ಆದರೆ ದೇವದೂತನು ಅವನಿಗೆ, “ಜಕರೀಯನೇ, ಹೆದರಬೇಡ. ನಿನ್ನ ಪ್ರಾರ್ಥನೆ ದೇವರಿಗೆ ಕೇಳಿಸಿತು. ನಿನ್ನ ಹೆಂಡತಿಯಾದ ಎಲಿಜಬೇತಳು ಒಂದು ಗಂಡುಮಗುವನ್ನು ಹೆರುವಳು. ನೀನು ಅವನಿಗೆ ಯೋಹಾನ ಎಂದು ಹೆಸರಿಡಬೇಕು. 14 ಅವನ ಜನನದಿಂದ ನಿಮಗೆ ಹರ್ಷಾನಂದವಾಗುವುದು. ಬಹುಜನರು ಸಂತೋಷಪಡುವರು. 15 ಪ್ರಭುವಿನ ದೃಷ್ಟಿಯಲ್ಲಿ ಯೋಹಾನನು ಮಹಾಪುರುಷನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿಯುವುದಿಲ್ಲ. ಯೋಹಾನನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು.[c]
16 “ಅನೇಕ ಯೆಹೂದ್ಯರು ತಮ್ಮ ದೇವರಾದ ಪ್ರಭುವಿನ ಕಡೆಗೆ ತಿರುಗಿಕೊಳ್ಳಲು ಅವನು ಸಹಾಯ ಮಾಡುವನು. 17 ಅವನು ಪ್ರಭುವಿಗೆ ಮುಂದೂತನಾಗಿ ಹೋಗುವನು. ಅವನು ಎಲೀಯನ[d] ಗುಣಶಕ್ತಿಗಳಿಂದ ಕೂಡಿದವನಾಗಿರುವನು; ತಂದೆ ಮತ್ತು ಮಕ್ಕಳ ನಡುವೆ ಸಮಾಧಾನವನ್ನು ಉಂಟುಮಾಡುವನು; ಅವಿಧೇಯರಾದ ಅನೇಕರನ್ನು ನೀತಿವಂತರ ಜ್ಞಾನದ ಕಡೆಗೆ ನಡೆಸುವನು; ಜನರನ್ನು ಪ್ರಭುವಿನ ಆಗಮನಕ್ಕೆ ಸಿದ್ಧಪಡಿಸುವನು” ಎಂದು ಹೇಳಿದನು.
Kannada Holy Bible: Easy-to-Read Version. All rights reserved. © 1997 Bible League International