Font Size
Readings for Celebrating Advent
Scripture passages that focus on the meaning of Advent and Christmas.
Duration: 35 days
Kannada Holy Bible: Easy-to-Read Version (KERV)
1 ಸಮುವೇಲನು 1:11
11 ಅವಳು ದೇವರಲ್ಲಿ ಒಂದು ವಿಶೇಷ ವಾಗ್ದಾನವನ್ನು ಮಾಡಿದಳು. ಅವಳು, “ಯೆಹೋವನೇ, ಸರ್ವಶಕ್ತನೇ,[a] ನಾನು ಎಷ್ಟು ದುಃಖಿತಳೆಂಬುದನ್ನು ನೋಡು, ನನ್ನನ್ನು ಜ್ಞಾಪಿಸಿಕೊ! ನನ್ನನ್ನು ಮರೆಯದಿರು. ನೀನು ನನಗೊಬ್ಬ ಮಗನನ್ನು ಕರುಣಿಸಿದರೆ, ಅವನು ಜೀವದಿಂದಿರುವ ತನಕ ನಿನ್ನವನಾಗಿರುವಂತೆ ನಿನಗೇ ಪ್ರತಿಷ್ಠಿಸುತ್ತೇನೆ. ಅವನು ನಾಜೀರನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಇತರೆ ಮದ್ಯವನ್ನಾಗಲಿ ಸೇವಿಸುವುದಿಲ್ಲ. ಅವನ ತಲೆಕೂದಲನ್ನು ಕ್ಷೌರ ಕತ್ತಿಯಿಂದ ಕತ್ತರಿಸುವುದಿಲ್ಲ”[b] ಎಂದು ಹೇಳಿದಳು
1 ಸಮುವೇಲನು 1:22
22 ಆದರೆ ಹನ್ನಳು ಹೋಗಲಿಲ್ಲ. ಅವಳು ಎಲ್ಕಾನನಿಗೆ, “ಮಗುವು ಗಟ್ಟಿಯಾದ ಊಟಮಾಡುವ ತನಕ ನಾನು ಬರುವುದಿಲ್ಲ. ಅವನು ದೊಡ್ಡವನಾದ ಮೇಲೆ ನಾನೇ ಶೀಲೋವಿಗೆ ಕರೆದೊಯ್ದು ಯೆಹೋವನಿಗೆ ಒಪ್ಪಿಸುತ್ತೇನೆ. ಅವನು ನಾಜೀರನಾಗುತ್ತಾನೆ. ಅವನು ಯಾವಾಗಲೂ ಶೀಲೋವಿನಲ್ಲಿಯೇ ಇರುತ್ತಾನೆ” ಎಂದು ಹೇಳಿದಳು.
Kannada Holy Bible: Easy-to-Read Version (KERV)
Kannada Holy Bible: Easy-to-Read Version. All rights reserved. © 1997 Bible League International