Readings for Celebrating Advent
ನೂತನ ಜೆರುಸಲೇಮ್
21 ನಂತರ ನೂತನ ಪರಲೋಕವನ್ನು ಮತ್ತು ನೂತನ ಭೂಮಿಯನ್ನು[a] ನಾನು ನೋಡಿದೆನು. ಮೊದಲನೆ ಪರಲೋಕ ಮತ್ತು ಮೊದಲನೆ ಭೂಮಿ ಅದೃಶ್ಯವಾಗಿದ್ದವು. ಅಲ್ಲಿ ಸಮುದ್ರವಿರಲಿಲ್ಲ. 2 ಪರಿಶುದ್ಧ ನಗರವು ಪರಲೋಕದಿಂದ ದೇವರ ಬಳಿಯಿಂದ ಇಳಿದು ಬರುತ್ತಿರುವುದನ್ನು ನಾನು ನೋಡಿದೆನು. ಈ ಪರಿಶುದ್ಧ ನಗರವೇ ನೂತನ ಜೆರುಸಲೇಮ್. ವಧುವು ತನ್ನ ಪತಿಗಾಗಿ ಶೃಂಗರಿಸಿಕೊಳ್ಳುವಂತೆ ಅದನ್ನು ಸಿದ್ಧಪಡಿಸಿದ್ದರು.
3 ಸಿಂಹಾಸನದಿಂದ ಒಂದು ಗಟ್ಟಿಯಾದ ಧ್ವನಿಯನ್ನು ನಾನು ಕೇಳಿದೆನು. ಆ ಧ್ವನಿಯು, “ಈಗ ದೇವರ ಮನೆಯು ಜನರ ಸಂಗಡವಿದೆ. ಆತನು ಅವರೊಂದಿಗೆ ನೆಲೆಸುತ್ತಾನೆ. ಅವರು ಆತನವರಾಗಿರುತ್ತಾರೆ. ದೇವರು ತಾನೇ ಅವರೊಂದಿಗೆ ಇರುತ್ತಾನೆ ಮತ್ತು ಅವರ ದೇವರಾಗಿರುತ್ತಾನೆ. 4 ದೇವರು ಅವರ ಕಣ್ಣೀರನ್ನೆಲ್ಲ ಒರಸಿ ಬಿಡುವನು. ಅಲ್ಲಿ ಇನ್ನು ಮರಣವಿರುವುದಿಲ್ಲ, ದುಃಖವಿರುವುದಿಲ್ಲ, ಗೋಳಾಟವಿರುವುದಿಲ್ಲ ಮತ್ತು ನೋವಿರುವುದಿಲ್ಲ. ಹಳೆಯ ಮಾರ್ಗಗಳೆಲ್ಲ ಹೋಗಿಬಿಟ್ಟವು” ಎಂದು ಹೇಳಿತು.
5 ಸಿಂಹಾಸನದ ಮೇಲೆ ಕುಳಿತಿದ್ದವನು, “ನೋಡು! ನಾನು ಎಲ್ಲವನ್ನೂ ಹೊಸದಾಗಿ ಸೃಷ್ಟಿಸುತ್ತೇನೆ!” ಎಂದು ಹೇಳಿದನು. ನಂತರ ಆತನು, “ಈ ವಾಕ್ಯಗಳು ಸತ್ಯವಾದುವುಗಳೂ ನಂಬತಕ್ಕವುಗಳೂ ಆಗಿರುವುದರಿಂದ ಇವುಗಳನ್ನು ಬರೆ” ಎಂದು ಹೇಳಿದನು.
6 ಸಿಂಹಾಸನದ ಮೇಲೆ ಕುಳಿತಿದ್ದಾತನು ನನಗೆ ಹೀಗೆ ಹೇಳಿದನು: “ಎಲ್ಲವೂ ನೆರವೇರಿತು! ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ನಾನೇ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ. ಬಾಯಾರಿದವರಿಗೆ ನಾನು ಜೀವಜಲದ ಬುಗ್ಗೆಯಿಂದ ನೀರನ್ನು ಉಚಿತವಾಗಿ ಕೊಡುತ್ತೇನೆ. 7 ಜಯಗಳಿಸುವವನು ಇದೆಲ್ಲವನ್ನು ಪಡೆಯುತ್ತಾನೆ. ನಾನು ಅವನ ದೇವರಾಗಿರುತ್ತೇನೆ, ಅವನು ನನ್ನ ಮಗನಾಗಿರುತ್ತಾನೆ.
Kannada Holy Bible: Easy-to-Read Version. All rights reserved. © 1997 Bible League International