Font Size
Readings for Celebrating Advent
Scripture passages that focus on the meaning of Advent and Christmas.
Duration: 35 days
Kannada Holy Bible: Easy-to-Read Version (KERV)
ಮಲಾಕಿ 3:1-3
3 ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ನನ್ನ ಮಾರ್ಗವನ್ನು ಸಿದ್ಧಮಾಡಲು ನಾನು ಮುಂದೂತನನ್ನು ಕಳುಹಿಸುತ್ತೇನೆ. ನೀವು ಹುಡುಕುತ್ತಿರುವ ಧಣಿಯು ತನ್ನ ಆಲಯಕ್ಕೆ ಬರುತ್ತಾನೆ. ಹೌದು, ನಿಮಗೆ ಬೇಕಾಗಿರುವ ಹೊಸ ಒಡಂಬಡಿಕೆಯ ಸಂದೇಶಕನು ನಿಜವಾಗಿಯೂ ಬರುತ್ತಿದ್ದಾನೆ.
2 “ಆ ಸಮಯಕ್ಕಾಗಿ ಯಾರೂ ಸಿದ್ಧಮಾಡಿಕೊಳ್ಳಲಾರರು. ಯಾರೂ ಆತನು ಬರುವಾಗ ಆತನಿಗೆ ವಿರುದ್ಧವಾಗಿ ನಿಲ್ಲರು. ಆತನು ಸುಡುವ ಬೆಂಕಿಯಾಗಿರುವನು. ಆತನು ಶಕ್ತಿಯುತವಾದ ಸಾಬೂನಿನಂತೆ ಕೊಳೆಯನ್ನು ಹೋಗಲಾಡಿಸಿ ಶುದ್ಧಮಾಡುವನು. 3 ಆತನು ಲೇವಿಯರನ್ನು ಶುದ್ಧಮಾಡುವನು. ಅವರನ್ನು ಬೆಂಕಿಯಿಂದ ಪರಿಶುದ್ಧ ಮಾಡುವನು. ಶುದ್ಧ ಬೆಳ್ಳಿ ಚಿನ್ನದಂತೆ ಆತನು ಅವರನ್ನು ಶುದ್ಧಿಮಾಡುವನು. ಆಗ ಅವರು ಯೆಹೋವನಿಗೆ ಕಾಣಿಕೆಗಳನ್ನು ತರುವರು; ಸರಿಯಾದ ರೀತಿಯಲ್ಲಿ ಕಾಣಿಕೆಗಳನ್ನು ಅರ್ಪಿಸುವರು.
Kannada Holy Bible: Easy-to-Read Version (KERV)
Kannada Holy Bible: Easy-to-Read Version. All rights reserved. © 1997 Bible League International