Print Page Options
Previous Prev Day Next DayNext

Readings for Celebrating Advent

Scripture passages that focus on the meaning of Advent and Christmas.
Duration: 35 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 100

ಕೃತಜ್ಞತಾ ಸ್ತುತಿಗೀತೆ.

100 ಸಮಸ್ತ ಭೂನಿವಾಸಿಗಳೇ,
    ಯೆಹೋವನಿಗೆ ಗಾಯನ ಮಾಡಿರಿ!
ಯೆಹೋವನ ಸೇವೆಯನ್ನು ಸಂತೋಷದಿಂದ ಮಾಡಿರಿ;
    ಹರ್ಷಗೀತೆಗಳೊಡನೆ ಆತನ ಸನ್ನಿಧಿಗೆ ಬನ್ನಿರಿ!
ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ.
    ನಮ್ಮನ್ನು ಸೃಷ್ಟಿಸಿದವನು ಆತನೇ, ನಾವು ಆತನವರು.
    ನಾವು ಆತನ ಜನರೂ ಮಂದೆಯೂ ಆಗಿದ್ದೇವೆ.
ಕೃತಜ್ಞತಾಗೀತೆಗಳೊಡನೆ ಆತನ ಪಟ್ಟಣಕ್ಕೆ ಬನ್ನಿರಿ.
    ಸ್ತುತಿಗೀತೆಗಳೊಡನೆ ಆತನ ಆಲಯಕ್ಕೆ ಬನ್ನಿರಿ.
    ಆತನನ್ನು ಸನ್ಮಾನಿಸುತ್ತಾ ಆತನ ಹೆಸರನ್ನು ಕೊಂಡಾಡಿರಿ.
ಯೆಹೋವನು ಒಳ್ಳೆಯವನು!
    ಆತನ ಪ್ರೀತಿಯು ಶಾಶ್ವತವಾದದ್ದು,
    ಆತನ ನಂಬಿಗಸ್ತಿಕೆಯು ನಿರಂತರವಾದದ್ದು.

ಪ್ರಕಟನೆ 3:20-22

20 ಇಗೋ, ನಾನು ಬಾಗಿಲ ಬಳಿ ನಿಂತುಕೊಂಡು ತಟ್ಟುತ್ತಿದ್ದೇನೆ. ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ, ನಾನು ಒಳಗೆ ಬಂದು ಅವನೊಂದಿಗೆ ಊಟ ಮಾಡುತ್ತೇನೆ ಮತ್ತು ಅವನು ನನ್ನೊಂದಿಗೆ ಊಟ ಮಾಡುತ್ತಾನೆ.

21 “ನಾನು ಜಯಗಳಿಸಿ ನನ್ನ ತಂದೆಯೊಡನೆ ಆತನ ಸಿಂಹಾಸನದ ಮೇಲೆ ಕುಳಿತುಕೊಂಡೆನು. ಅಂತೆಯೇ ಜಯಗಳಿಸುವ ಪ್ರತಿಯೊಬ್ಬನೂ ನನ್ನ ಸಂಗಡ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು. 22 ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು.”

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International